ಯಶವಂತಪುರಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲು ಕಾಂಗ್ರೆಸ್‌ ಕಸರತ್ತು

0
165
Loading...

ಈಗಾಗಲೇ ಉಪ ಚುನಾವಣಾ ಕಣ ರಂಗೇರಿದೆ. ಆದರೆ ಕೆಲವೊಂದು ಕ್ಷೇತ್ರಗಳಿಗೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನು ಫೈನಲ್ ಆಗಿಲ್ಲ. ಅದರಲ್ಲೂ ಯಶವಂತಪುರಕ್ಕೆ ಸೂಕ್ತ ಅಭ್ಯರ್ಥಿ ಯಾರು ಎನ್ನುವುದು ಗೊಂದಲವಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಸಾಕಷ್ಟು ಸಭೆಗಳನ್ನು ಕೂಡ ಕಾಂಗ್ರೆಸ್ ಮುಖಂಡರು ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿ ಫೈನಲ್ ಕಸರತ್ತು ಮುಂದುವರೆದಿದೆ.

ಮೂಲಗಳ ಪ್ರಕಾರ, ಈ ಹಿಂದೆ ನಡೆದ ಸಭೆಗಳಲ್ಲಿ ಪ್ರಿಯಾಕೃಷ್ಣ ಅವರಿಗೆ ಯಶವಂತಪುರ ಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಮಾಡಲು ಸೂಚನೆ ನೀಡಲಾಗಿತ್ತು. ಈ ಬಗ್ಗೆ ಕೃಷ್ಣಪ್ಪ ಅವರ ಜೊತೆ ಮಾತುಕತೆ ಮಾಡಲಾಗಿತ್ತು. ಆದರೆ ಇದಕ್ಕೆ ಮಾಜಿ ಶಾಸಕ ಪ್ರಿಯಾಕೃಷ್ಣ ಒಪ್ಪಿಲ್ಲದ ಕಾರಣ ಇದೀಗ ಯಶವಂತಪುರಕ್ಕೆ ಯಾವ ಅಭ್ಯರ್ಥಿಯನ್ನು ನಿಲ್ಲಿಸುವುದೆಂಬ ಗೊಂದಲ ಪ್ರಾರಂಭವಾಗಿದೆ.

ಈಗಾಗಲೇ ನಾಮಿನೇಷನ್ ಪ್ರಕ್ರಿಯೆ ಆರಂಭವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ಇರುವುದರಿಂದ ಅಭ್ಯರ್ಥಿ, ನಾಮಪತ್ರ ಸಲ್ಲಿಸಿ ಪ್ರಚಾರಕ್ಕಿಳಿಯಬೇಕಿದೆ. ಹಾಗಾಗಿ ಕಾಂಗ್ರೆಸ್‌ನಲ್ಲಿ ಗೊಂದಲ ಪ್ರಾರಂಭವಾಗಿದೆ.

Loading...

LEAVE A REPLY

Please enter your comment!
Please enter your name here