ಬಸನಗೌಡ ತುರ್ವಿಹಾಳ್ ಕಾಂಗ್ರೆಸ್ ಮಸ್ಕಿ ಅಭ್ಯರ್ಥಿ

0
60

ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಬಸನಗೌಡ ತುರ್ವಿಹಾಳ್ ಕಣಕ್ಕೆ ಇಳಿಯಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ್ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.

ಈ ಬಗ್ಗೆ ತಮ್ಮ ನಿವಾಸದ ಬಳಿ ಮಾಹಿತಿ ನೀಡಿದ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಅವರೇ ನಮ್ಮ ಅಭ್ಯರ್ಥಿಯಾಗಬಹುದು. ನಾವು ನಾಳೆ ಮಸ್ಕಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು- ಕಾರ್ಯಕರ್ತರ ಸಮಾಲೋಚನೆ ನಡೆಸಿ ತೀರ್ಮಾನಿಸುತ್ತೇವೆ.‌ ಬಸವನಗೌಡ ಅವರು ಕಳೆದ ಬಾರಿ ಬಿಜೆಪಿ ಕ್ಯಾಂಡಿಡೆಟ್ ಆಗಿದ್ರು. ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಾರೆ. ಎರಡೂ ಕಡೆ ಜನರ ಅಭಿಪ್ರಾಯ ಸಂಗ್ರಹ ಮಾಡುವುದಕ್ಕೆ ಎರಡು ಟೀಮ್ ಮಾಡುತ್ತೇವೆ. ಪ್ರಕಾಶ್ ಹುಕ್ಕೇರಿಯವರ ಅಸಮಾಧಾನದ ಬಗ್ಗೆ ನನಗೆ ತಿಳಿದಿಲ್ಲ. ಅವರು ನಮ್ಮ ಜೊತೆಯಲ್ಲಿ ಏನನ್ನೂ ಹೇಳಿಲ್ಲ. ಇವೆಲ್ಲ ಹುಕ್ಕೇರಿ ಹೆಸರಿನಲ್ಲಿ ಬಿಜೆಪಿಯವರು ನಡೆಸುತ್ತಿರುವ ಸುಳ್ಳು ಪ್ರಚಾರ ಇದ್ದಿರಲೂ ಬಹುದು. ಅದನ್ನು ತಿಳಿದುಕೊಳ್ತೇವೆ ಎಂದರು.

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿ ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ. ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ.‌ ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಖಂಡನೀಯ ಎಂದು ವಿರೋಧಿಸಿದರು.

ಅಖಂಡ ಶ್ರೀನಿವಾಸ ಮೂರ್ತಿಗೆ ನ್ಯಾಯ ಕೊಡಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಇದ್ರ ಬಗ್ಗೆ ಬಹಿರಂಗವಾಗಿ ಹೇಳಿಕೆ ಕೊಡೋದಿಲ್ಲ. ಕೆಪಿಸಿಸಿ ಅಧ್ಯಕ್ಷರ ಜೊತ ಚರ್ಚೆ ಮಾಡ್ತೀನಿ. ಕ್ರಮ ಕೈಗೊಳ್ಳಲು ಶಿಸ್ತು ಸಮಿತಿ ಇದೆ. ನಾನು ಯಾರ ವಿರೋಧಿಯೂ ಅಲ್ಲ ನನಗೆ ಎಲ್ಲರೂ ಆಪ್ತರೆ. ನಾನು ಯಾರ ಪರವೂ ಅಲ್ಲ ನಾನು ನ್ಯಾಯದ ಪರ. ಕಳೆದ ಚುನಾವಣೆಯಲ್ಲಿ ಸಂಪತ್ ರಾಜ್ ಗೆ ಟಿಕೆಟ್ ಕೊಡಿಸಿದ್ದು ನಾನೇ. ಹಾಗಂತ ನಾನು ಅವರು ಪರ ಅಂತ ಹೇಳೋಕೆ ಆಗುತ್ತಾ? ನಾನು ಲಾ ಪರ ಅಷ್ಟೇ ಎಂದರು.

ಇನ್ನು ಡಿಕೆ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಅವರಿಗೆ ಯಾವುದಕ್ಕೆ ಸಮನ್ಸ್ ನೀಡಿದ್ದಾರೆ ಎಂದು ಗೊತ್ತಿಲ್ಲ. ಕಾನೂನಿನ ಅಡಿಯಲ್ಲಿ ಅವರು ಹೋರಾಟ ಮಾಡುತ್ತಾರೆ
ಎಂದು ತಿಳಿಸಿದರು.

ಬೈ ಎಲೆಕ್ಷನ್ ಸೋಲಿನ ಬಗ್ಗೆ ಮಾತನಾಡಿದ ಅವರು, ಬೈ ಎಲೆಕ್ಷನ್ ಲ್ಲಿ ಆಡಳಿತ ಪಕ್ಷಕ್ಕೆ ಎರಡು ಕ್ಷೇತ್ರದಲ್ಲಿ ಲಾಭ ಆಗಿದೆ. ಆಡಳಿತ ದುರುಪಯೋಗ ಮಾಡ್ತಾರೆ ಎಂಬ ಕಾರಣಕ್ಕೆ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತೋ ಅವರೇ ಗೆಲ್ಲೋದು. ನಾನು ಸಿಎಂ ಆಗಿದ್ದಾಗ ಒಂದು ಕ್ಷೇತ್ರ ಬಿಟ್ಟು ಉಳಿದ ಎಲ್ಲ ಉಪಚುನಾವಣೆಗಳನ್ನ ಗೆಲ್ಲಿಸಿಕೊಂಡಿದ್ವಿ. ಶಿರಾದಲ್ಲಿ ನಾವು ಹಣದ ಕೊರತೆಯಿಂದ ಸೋತ್ವಿ. ಬಿಜೆಪಿ ಅವರು ಸಿಕ್ಕಾಪಟ್ಟೆ ಹಣ ಹಂಚಿದ್ರು ಎಂದು ಸೋಲಿನ ಪರಾಮರ್ಶೆ ಮಾಡಿದರು.

LEAVE A REPLY

Please enter your comment!
Please enter your name here