“ಭಾರತರತ್ನ” ಪ್ರಶಸ್ತಿಗೆ ಪಾತ್ರರಾದ ಪ್ರಣಬ್ ಮುಖರ್ಜಿ

0
219

ಪ್ರಣಬ್ ಮುಖರ್ಜಿ ಅವರಿಗೆ ಆಗಸ್ಟ್ 8 ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.
ಅಂತೆಯೇ ಮರಣೋತ್ತರವಾಗಿ ಸಾಮಾಜಿಕ ಹೋರಾಟಗಾರ ನಾನಾಜಿ ದೇಶ್ ಮುಖ್ ಹಾಗೂ ಭೂಪೇನ್ ಹಜಾರಿಕಾ ಅವರಿಗೆ ಅಂದೇ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
2012ರಿಂದ 2017ರವರೆಗೂ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ ಪ್ರಣಬ್ ಮುಖರ್ಜಿ, ‘ಪ್ರಣಬ್ ದಾ’ ಎಂದು ಖ್ಯಾತರಾಗಿದ್ದಾರೆ. 83 ವರ್ಷದ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಪಕ್ಷದ ಸರ್ವಶ್ರೇಷ್ಠ ವ್ಯಕ್ತಿಯಾಗಿಯೂ ಹೆಸರಾಗಿದ್ದಾರೆ.
ಸರ್ವಪಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಜಾಕೀರ್ ಹುಸೇನ್ ಮತ್ತು ವಿವಿ ಗಿರಿ ನಂತರ ಭಾರತ ರತ್ನ ಪ್ರಶಸ್ತಿ ಪಡೆದ ಮಾಜಿ ರಾಷ್ಟ್ರಪತಿಗಳ ಸಾಲಿನಲ್ಲಿ ಇದೀಗ ಪ್ರಣಬ್ ಮುಖರ್ಜಿಯೂ ಸೇರುತ್ತಿದ್ದಾರೆ.

LEAVE A REPLY

Please enter your comment!
Please enter your name here