‘ಸಿದ್ಧಾರ್ಥ್ ಪತ್ರ ನೋಡಿ ನನ್ನ ಹೃದಯ ನುಚ್ಚುನಾರಾಯ್ತು’ ಎಂದ ವಿಜಯ್ ಮಲ್ಯ..!

0
190

ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಸಾವಿನ ಹಿನ್ನಲೆ ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ನಾನು ಕಾಫಿ ಉದ್ಯಮಿ ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ. ಅವರೊಬ್ಬ ಒಳ್ಳೆ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್‍ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಹೇಗೆ ಮಾಡ್ತಿದ್ದಾರೆ ನೋಡಿ. ಯೂರೋಪ ರಾಷ್ಟ್ರಗಳಲ್ಲಿ ಸರ್ಕಾರ ಮತ್ತು ಬ್ಯಾಂಕ್‍ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್‍ಗಳು ತಡೆಗೋಡೆಯಾಗಿ ನಿಂತಿದ್ದವು” ಎಂದು ವಿಜಯ್ ಮಲ್ಯ ಭಾರತದ ಬ್ಯಾಂಕುಗಳು ಮತ್ತು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here