ಕರ್ನಾಟಕದಲ್ಲಿ ಶೀಘ್ರವೇ 20 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ..!

0
528

‘ದೇಶದ ಆರ್ಥಿಕ ಪರಿಸ್ಥಿತಿ ಭಯಾನಕ ಸ್ಥಿತಿಯಲ್ಲಿದೆ’ ಎಂದು ಇತ್ತೀಚೆಗೆ ಯೋಜನಾ ಆಯೋಗದ ಉಪಾಧ್ಯಕ್ಷರೇ ತಿಳಿಸಿದ ಬೆನ್ನಲ್ಲೇಸ, ಶೀಘ್ರವೇ ಕರ್ನಾಟಕದಲ್ಲಿ ಸುಮಾರು 20 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಆರ್. ರಾಜು ಭವಿಷ್ಯ ನುಡಿದಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತೆರಿಗೆ ನೀತಿ ಹಾಗೂ ದೇಶ ಎದುರಿಸುತ್ತಿರುವ ಆರ್ಥಿಕ ಹಿಂಜರಿತದಿಂದ ಕರ್ನಾಟಕ ರಾಜ್ಯದ ಸಣ್ಣ ಕೈಗಾರಿಕಾ ವಲಯ ಕುಸಿದು ಬಿದ್ದಿದ್ದು, ಸುಮಾರು ಆರು ಸಾವಿರ ಸಣ್ಣ ಮತ್ತು ಮದ್ಯಮ ಕೈಗಾರಿಕೆಗಳು ನಷ್ಟದಲ್ಲಿವೆ. ಹೀಗಾಗಿ ಕರ್ನಾಟಕದಲ್ಲಿ ಸುಮಾರು 20 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಕೇಂದ್ರ ಸರ್ಕಾರದ ತೆರಿಗೆ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಇನ್ನೂ ಬಿಗಾಡಿಸುವ ಸಾಧ್ಯತೆ ಇದೆ. ಹೀಗಾದರೆ ಆಟೋ ಮೊಬೈಲ್, ಜವಳಿ ಸೇರಿದಂತೆ ಹಲವು ಉದ್ಯಮಗಳು ಭಾರೀ ಸಮಸ್ಯೆಗೆ ಸಿಲುಕಲಿವೆ. ದೇಶದ ಆರ್ಥಿಕತೆ ತೀವ್ರ ಕುಸಿತ ಕಾಣಲಿದೆ. ಇದರ ಪರಿಣಾಮ ರಾಜ್ಯದ ಮೇಲು ಉಂಟಾಗಲಿದೆ.

LEAVE A REPLY

Please enter your comment!
Please enter your name here