ರಾಜ್ಯ ಸರ್ಕಾರಿ ನೌಕರರಿಗೂ ಆರೋಗ್ಯ ಭಾಗ್ಯ..!?

0
111

ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇನ್ನು ಈ ಹಿಂದೆ ಸರ್ಕಾರಿ ನೌಕರರು ಪಡೆದ ಚಿಕಿತ್ಸೆ ವೆಚ್ಚದ ಮರುಪಾವತಿ ವಿಳಂಬವಾಗುತ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಆರೋಗ್ಯ ಭಾಗ್ಯ ಯೋಜನೆಯ ಮೂಲಕ ಸರ್ಕಾರಿ ನೌಕರರಿಗೂ ನೆರವಾಗುವ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನ ರಾಜ್ಯದ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮನವಿ ಸಲ್ಲಿಸಲಾಗಿದೆ. ಆರೋಗ್ಯ ಭಾಗ್ಯ ಯೋಚನೆ ವಿಸ್ತರಣೆಗೆ ವಿವರವಾದ ಪ್ರಸ್ತಾವನೆ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲಿಯೇ ಜಾರಿಗೆ ತರುವ ಸಾಧ್ಯತೆಗಳಿವೆ. ಈ ಯೋಜನೆ ಜಾರಿಯಾದ್ರೆ ಸರ್ಕಾರಿ ನೌಕರರೂ ಕೂಡಾ ಉಚಿತವಾಗಿ ಆರೋಗ್ಯ ಸೇವೆ ಪಡೆದುಕೊಳ್ಳಬಹುದಾಗಿದೆ.

LEAVE A REPLY

Please enter your comment!
Please enter your name here