ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಖಾತೆಗೆ ಮತ್ತೊಂದು ವಿಶ್ವದಾಖಲೆ

0
321

ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್‌ ಶರ್ಮಾ ಸಿಕ್ಸರ್‌ಗಳ ವಿಶ್ವದಾಖಲೆಯನ್ನೂ ಮುಡಿಗೇರಿಸಿಕೊಂಡಿದ್ದಾರೆ.

ಭಾನುವಾರ ಲೌಡರ್‌ಹಿಲ್‌ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್‌ ಇಂಡೀಸ್‌ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ 3 ಸಿಕ್ಸರ್‌ ಬಾರಿಸುವ ಮೂಲಕ ರೋಹಿತ್‌ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ಸಿಕ್ಸರ್‌ ಸಿಡಿಸಿದ ವಿಶ್ವದಾಖಲೆ ಮಾಡಿದ್ದಾರೆ. ಈ ಮೂಲಕ ವೆಸ್ಟ್ ವಿಂಡೀಸ್‌ನ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ರ 105 ಸಿಕ್ಸರ್ ಅವರನ್ನು ಹಿಂದಿಕ್ಕಿದ್ದಾರೆ . ಈ ಪಂದ್ಯ ಆರಂಭಕ್ಕು ಮುನ್ನ 104 ಸಿಕ್ಸರ್‌ಗಳನ್ನು ಸಿಡಿಸಿದ್ದ ರೋಹಿತ್‌ ಶರ್ಮಾ ಭಾನುವಾರದ ಪಂದ್ಯದಲ್ಲಿ 51 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 6 ಫೋರ್ ನೊಂದಿಗೆ 67 ರನ್‌ ಗಳಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20ಯಲ್ಲಿ ತಮ್ಮ ಖಾತೆಗೆ ಒಟ್ಟು 107 ಸಿಕ್ಸರ್‌ಗಳನ್ನು ಜಮಮಾಡಿಕೊಳ್ಳುವ ಮೂಲಕ ಮೊದಲನೆಯ ಸ್ಥಾನವನ್ನು ಅಲಂಕರಿಸಿದ್ದಾರೆ.

ವೆಸ್ಟ್ ಇಂಡೀಸ್‌ನ ಅನುಭವಿ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ 105 ಸಿಕ್ಸರ್ ಅನ್ನು ತಮ್ಮ ಖಾತೆಯಲ್ಲಿ ಹೊಂದಿದ್ದು ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ ಹಾಗೆಯೇ ನ್ಯೂಜಿಲೆಂಡ್‌ ತಂಡದ ಬ್ಯಾಟ್ಸ್‌ಮನ್‌ ಮಾರ್ಟಿನ್‌ ಗಪ್ಟಿಲ್‌ 103 ಸಿಕ್ಸರ್ ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದು ಮೂರನೇ ಸ್ಥಾನದಲ್ಲಿದ್ದಾರೆ.

ರೋಹಿತ್ ಶರ್ಮಾ ಅವರು ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ ಪರ 96 ಪಂದ್ಯಗಳಲ್ಲಿ 2422 ರನ್ ಗಳಿಸಿ ಅತಿ ಹೆಚ್ಚು ರನ್‌ ಗಳಿಸಿರುವ ಬ್ಯಾಟ್ಸ್‌ಮನ್‌ ಕೂಡ ಇವರಾಗಿದ್ದಾರೆ . ಇನ್ನು ಚುಟುಕು ಕ್ರಿಕೆಟ್‌ ಪಂದ್ಯಗಳಲ್ಲು ಸಹ 4 ಶತಕಗಳನ್ನು ಸಿಡಿಸಿದ ವಿಶ್ವದ ಏಕಮಾತ್ರ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಆಗಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿರುವ ಬ್ಯಾಟ್ಸ್‌ಮನ್‌ಗಳ ವಿವರ :
1 – ರೋಹಿತ್ ಶರ್ಮಾ 107 ಸಿಕ್ಸರ್
2 – ಕ್ರಿಸ್‌ ಗೇಲ್‌ 105 ಸಿಕ್ಸರ್
3 – ಮಾರ್ಟಿನ್‌ ಗಪ್ಟಿಲ್‌ 103 ಸಿಕ್ಸರ್
4 – ಕಾಲಿನ್‌ ಮನ್ರೊ 92 ಸಿಕ್ಸರ್
5 – ಬ್ರೆಂಡನ್‌ ಮೆಕಲಮ್‌ 91 ಸಿಕ್ಸರ್

LEAVE A REPLY

Please enter your comment!
Please enter your name here