‘ಬಾದಾಮಿಲಿ ಧೂಳ್ ಇದೆರಿ, ಅದ್ಕೆ ಹೋಗ್ಲಿಲ್ಲ’ ಎಂದ ಸಿದ್ದು..!

0
102

ಟ್ವೀಟರ್‍ನಲ್ಲಿ ಸದಾ ಸಕ್ರಿಯರಾಗಿರುವ ಮಾಜಿ ಸಿಎಂ ಸಿದ್ದರಾಮ್ಯನವರು ಇದೀಗ ಉತ್ತರ ಕನಾಟಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು, ಉತ್ತರ ಕರ್ನಾಟಕದ 12 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಅನೇಕ ಸಂಘ-ಸಂಸ್ಥೆಗಳು ಸಂತ್ರಸ್ಥರ ನೆರವಿಗೆ ಧಾವಿಸಿವೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯನವರು ಮಾತ್ರ ಸ್ವಕ್ಷೇತ್ರ ಬಾದಾಮಿಗೂ ಭೇಟಿ ನೀಡುತ್ತಿಲ್ಲ.

ಆದರೆ ಈ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯನವರು, “ನನ್ನ ಕಣ್ಣಿಗೆ ಶಸ್ತ್ರಚಿಕಿತ್ಸೆ ಆಗಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ವೈದ್ಯರು 15 ದಿನದ ವಿಶ್ರಾಂತಿ ಸೂಚಿಸಿದ್ದಾರೆ. ತಲೆಗೆ ಸ್ನಾನ ಮಾಡುವಂತೆಯೂ ಇಲ್ಲ. ಇನ್ನು ಬಾದಾಮಿಗೆ ಹೋದರೆ ಧೂಳು ಇರುತ್ತದೆ. ವೈದ್ಯರು ಧೂಳಿನಿಂದ ದೂರ ಇರುವಂತೆ ಹೇಳಿದ್ದಾರೆ. ಈಗ ನಾನು ಏಸಿಯಲ್ಲಿ ಓಡಾಡುತ್ತಿದ್ದೇನೆ. ವಿಮಾನ ನಿಲ್ದಾಣಕ್ಕೆ ಬರುವಾಗ ಏಸಿ ಗಾಡಿಯಲ್ಲಿ ಬಂದೆ. ವಿಮಾನ ನಿಲ್ದಾಣ, ವಿಮಾನ ಎಲ್ಲವೂ ಹವಾನಿಯಂತ್ರಿತವೇ. ಇಲ್ಲೂ ಏಸಿಯಿದೆ. ಮುಂಜಾಗ್ರತೆ ವಹಿಸದಿದ್ದರೆ ಇನ್‍ಫೆಕ್ಷನ್ ಆಗಬಹುದು. ನನಗೆ ಶುಗರ್ ಬೇರೆಯಿದೆ” ಎಂದು ಕಾರಣಗಳ ಪ್ರವಾಹವನ್ನೇ ಹರಿಸಿದ್ದಾರೆ.

LEAVE A REPLY

Please enter your comment!
Please enter your name here