ಬಿಗ್ ಬ್ರೇಕಿಂಗ್ : ಅನರ್ಹ ಶಾಸಕರ ಕಿವಿಗೆ ‘ಹೂ’ವಿಡಲು ಕಮಲ ಪಡೆ ಸಜ್ಜು..!

0
1814

ಕಾಂಗ್ರೆಸ್ –ಜೆಡಿಎಸ್ ಸರ್ಕಾರ ಪತನವಾಗಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರ ಕಿವಿಗೆ ‘ಹೂ’ವಿಡಲು ತೆರೆ ಮರೆಯಲ್ಲಿ ಬಿಜೆಪಿ ನಾಯಕರು ಭಾರೀ ಕಾರ್ಯತಂತ್ರ ಹೆಣೆದಿದ್ದಾರೆ. ಸುಪ್ರೀಂಕೋರ್ಟ್ ಆದೇಶ ತಮ್ಮ ಪರವಾಗಿ ಬಂದ ನಂತರ ಬಿಜೆಪಿ ಸರ್ಕಾರದಲ್ಲಿ ಪ್ರಭಾವಿ ಸಚಿವ ಸ್ಥಾನಗಳನ್ನು ಪಡೆಯುವ ಹುಮ್ಮಸ್ಸಿನಲ್ಲಿರುವ ಅನರ್ಹ ಶಾಸಕರನ್ನು ಹದ್ದುಬಸ್ತಿನಲ್ಲಿಡಲು ಬಿಜೆಪಿ ನಾಯಕರು ಹೊಸ ತಂತ್ರ ಹಣೆದಿದ್ದಾರೆ.

ಹೌದು, ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಬಿ.ಎಸ್ ಯಡಿಯೂರಪ್ಪನವರ ಸರ್ಕಾರದಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಅನರ್ಹ ಶಾಸಕರನ್ನು ನಿಯಂತ್ರಿಸಲು ಮತ್ತೊಂದು ಸುತ್ತಿನ ಆಪರೇಷನ್ ಕಮಲಕ್ಕೆ ಪ್ರಯತ್ನಗಳು ಆರಂಭವಾಗಿವೆ. ಮುಂದಿನ ದಿನಗಳಲ್ಲಿ ಅಧಿಕಾರಕ್ಕಾಗಿ ಅನರ್ಹ ಶಾಸಕರ ಒತ್ತಡ ಹೆಚ್ಚಾಗಬಹುದು. ಅವರನ್ನು ಹದ್ದುಬಸ್ತಿನಲ್ಲಿಡಲು ಮತ್ತೊಂದು ಸುತ್ತಿನ ಆಪರೇಷನ್ ಕಮಲಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಇನ್ನು ಬಿಜೆಪಿ ನಾಯಕರ ಈ ತಂತ್ರವನ್ನು ತಿಳಿದು ಅನರ್ಹ ಶಾಸಕರು ಕೆಂಡಾಮಂಡಲರಾಗಿದ್ದಾರೆ. ತಮಗೆ ಸಚಿವ ಸ್ಥಾನ ನೀಡಲೇಬೇಕೆಂದು ಸಿಎಂ ಯಡಿಯೂರಪ್ಪನವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈ ಮಧ್ಯೆ ಅನರ್ಹ ಶಾಸಕರನ್ನು ಹತೋಟಿಯಲ್ಲಿಟ್ಟು ಸರ್ಕಾರವನ್ನು ಸುಭದ್ರಗೊಳಿಸಿಕೊಳ್ಳಲು ಮತ್ತೊಂದು ಸುತ್ತಿನ ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಪ್ರಯತ್ನ ನಡೆಸಿದೆ. ಈ ಹಿಂದೆ ಅನರ್ಹ ಶಾಸಕರ ಬಗ್ಗೆ ತೋರುತ್ತಿದ್ದ ಕಾಳಜಿ ಈಗ ಬಿಜೆಪಿಯಲ್ಲಿ ಇಲ್ಲವಾಗಿದೆ.

ಅವರನ್ನು ರಾಜಕೀವಾಗಿ ಬಳಸಿಕೊಂಡು ಕೈಬಿಡುವ ಪ್ರಯತ್ನ ನಡೆದಿದೆ. ಕೆಲವರಿಗೆ ಸಚಿವ ಸ್ಥಾನ ಇನ್ನು ಕೆಲವು ಅನರ್ಹ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here