ಎಸ್ಸಿ, ಎಸ್ಟಿಗೆ ಭರ್ಜರಿ ಕೊಡುಗೆ ನೀಡಿದ ಬಿಜೆಪಿ ಸರ್ಕಾರ

0
296

ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡ ಸಮುದಾಯದವರಿಗೆ ರಾಜ್ಯ ಬಿಜೆಪಿ ಸರ್ಕಾರ ಭರ್ಜರಿ ಕೊಡುಗೆ ಘೋಷಿಸಿದೆ. ಹಾಲಿಗೆ ಪ್ರೋತ್ಸಾಹಧನ ಹೆಚ್ಚಳ, ಕೃಷಿ ಉಪಕರಣ ಖರೀದಿ, ರೇಷ್ಮೆ ಕೃಷಿಗೆ ಶೆಡ್ ನಿರ್ಮಾಣ, ಹನಿ ನೀರಾವರಿ, ಪಾಲಿ ಹೌಸ್ ನಿರ್ಮಾಣಕ್ಕೆ ಶೇಕಡಾ 90ರಷ್ಟು ಸಹಾಯಧನ ನೀಡುವ ಹೊಸ ಯೋಜನೆಯೊಂದನ್ನು ಘೋಷಿಸಿದೆ. ಇನ್ನು ಮೈತ್ರಿ ಸರ್ಕಾರ ರೂಪಿಸಿದ್ದ ‘ಬಡವರ ಬಂಧು’ ಯೋಜನೆಯಡಿ ಪರಿಶಿಷ್ಟ ಪಂಗಡ ಮಹಿಳೆಯರಿಗೆ 10 ಸಾವಿರ ರೂಪಾಯಿ ಸಾಲ ಸೌಲಭ್ಯ, ದೇವದಾಸಿಯರಿಗೆ 500 ರೂಪಾಯಿ ಮಾಸಿಕ ಪಿಂಚಣಿ, ಸ್ವ ಸಹಾಯ ಗುಂಪುಗಳಿಗೆ ಬಡ್ಡಿ ರಹಿತವಾಗಿ ನೀಡುತ್ತಿದ್ದ ಸಾಲ ಎರಡು ಲಕ್ಷ ರೂ.ನಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಳ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಒದಗಿಸಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ.

ಇನ್ನು ಲೋಕೋಪಯೋಗಿ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಭಾರಿ ನೀರಾವರಿ ಇಲಾಖೆಗಳಲ್ಲಿ ಖರ್ಚಾಗದೇ ಉಳಿದಿರುವ 1120 ಕೋಟಿ ರೂಪಾಯಿ ಅನುದಾನವನ್ನು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡದ ಜನರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಂಸದ ಉಮೇಶ್ ಜಾಧವ್ ಮುಂತಾದವರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here