ಸ್ಪೀಕರ್ ಆಯ್ಕೆಯಲ್ಲಿಯೂ ನಡೆಯಲಿಲ್ಲ ಬಿಎಸ್‍ವೈ ಆಟ..!

0
122

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪನವರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಮೊದಲ ಶಾಕ್ ನೀಡಿದ್ದಾರೆ. ವಿಧಾನಸಭಾ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯನವರ ಆಯ್ಕೆಗೆ ಒಲವು ತೋರಿದ್ದ ಯಡಿಯೂರಪ್ಪನವರಿಗೆ ‘ನೋ’ ಎನ್ನುವ ಮೂಲಕ ಬಿಎಸ್‍ವೈ ಆಟಕ್ಕೆ ಅಮಿತ್ ಶಾ ತಡೆಯೊಡ್ಡಿದ್ದಾರೆ.

ಬಿಜೆಪಿ ಹೈಕಮಾಂಡ್ ನಾಯಕರು ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್ ಆಗುವಂತೆ ನೋಡಿಕೊಂಡಿದ್ದಾರೆ. ಈ ಹಿಂದೆ ಸ್ಪೀಕರ್ ಆಗಿದ್ದ ಕೆ.ಜಿ. ಬೋಪಯ್ಯ ತೆಗೆದುಕೊಂಡ ಕೆಲವು ನಿರ್ಧಾರಗಳು ತೀವ್ರ ಟೀಕೆಗೆ ಗುರಿಯಾಗಿದ್ದವು. ಹೀಗಾಗಿ ಕೆ.ಜಿ. ಬೋಪಯ್ಯ ಸ್ಪೀಕರ್ ಆದರೆ ಪಕ್ಷ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಬೋಪಯ್ಯನವರ ಆಯ್ಕೆಗೆ ಅಮಿತ್ ಶಾ ಒಪ್ಪಿಗೆ ನೀಡಲಿಲ್ಲ ಎನ್ನಲಾಗಿದೆ.

LEAVE A REPLY

Please enter your comment!
Please enter your name here