ಬಿಎಸ್‍ವೈ ಆಳಿಯನಿಗೆ ಮೈಸೂರು ಡೇರಿ ನಿರ್ದೇಶಕ ಸ್ಥಾನ, ಅಧಿಕಾರ ದುರುಪಯೋಗ ಪಡಿಸಿಕೊಂಡ್ರಾ ಸಿಎಂ ಬಿಎಸ್‍ವೈ..?!

0
148

ಬಿ.ಎಸ್.ಯಡಿಯೂರಪ್ಪ ಅವರ ತಂಗಿಯ ಪುತ್ರ ಎಚ್.ಸಿ.ಅಶೋಕ್ ಅವರನ್ನು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿ ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಹೌದು, ಮೂಲತಃ ಮೈಸೂರಿನ ನಿವಾಸಿಯಾದ ಅಶೋಕ್ ಅವರನ್ನು ಈ ಹಿಂದೆಯೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಮೈಸೂರು ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಇದೀಗ ಮತ್ತೆ ನಿರ್ದೇಶಕ ಸ್ಥಾನಕ್ಕೆ ನೇಮಿಸಿರುವುದು ಸಿಎಂ ಯಡಿಯೂರಪ್ಪನವರು ಅಧಿಕಾರ ದುರುಪಯೋಗ ಪಡಿಸಿಕೊಂಡ್ರಾ ಎಂಬ ಅನುಮಾನ ಹುಟ್ಟುಹಾಕಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಅಳಿಯನಿಗೆ ಅಧಿಕಾರ ನೀಡಿರುವ ಬಿಎಸ್‍ವೈ ನಿರ್ಧಾರಕ್ಕೆ ಪಕ್ಷದಲ್ಲಿಯೂ ಅಪಸ್ವರ ಕೇಳಿ ಬಂದಿದೆ ಎನ್ನಲಾಗಿದೆ.

ಇನ್ನು ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ. “ಅಜ್ಜಿಗೆ ಅರಿವೆ ಚಿಂತೆ ಆದ್ರೆ ಮೊಮ್ಮಗಳಿಗೆ ಮದುವೆ ಚಿಂತೆಯಂತೆ. ಹಾಗೆಯೇ ಉತ್ತರ ಕರ್ನಾಟಕದ ಜನ ಪ್ರವಾಹದಿಂದ ತತ್ತರಿಸುತ್ತಿದ್ದಾರೆ. ಇತ್ತ ಯಡಿಯೂರಪ್ಪನವರು ತಂಗಿ ಮಗನಿಗೆ ಹಾಲು ಉತ್ಪಾದಕರ ಒಕ್ಕೂಟಕ್ಕೆ ನೇಮಕ ಮಾಡುವುದರಲ್ಲಿ ನಿರತರಾಗಿದ್ದಾರೆ” ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

LEAVE A REPLY

Please enter your comment!
Please enter your name here