ಕರ್ನಾಟಕದ ಕೆನರಾ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳು ಇನ್ನು ನೆನಪು ಮಾತ್ರ..!

0
1261

ಬ್ಯಾಂಕಿಂಗ್ ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ದೇಶದ ಪ್ರಮುಖ ಬ್ಯಾಂಕುಗಳ ವಿಲೀನಕ್ಕೆ ಮುಂದಾಗಿದ್ದು, ಈ ಹಿಂದೆ ಕರ್ನಾಟಕ ಮೂಲದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮತ್ತು ವಿಜಯಾ ಬ್ಯಾಂಕ್‍ಗಳನ್ನು ಬೇರೆ ಬ್ಯಾಂಕ್‍ಗಳಲ್ಲಿ ವಿಲೀನ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಕನ್ನಡಿಗರಿಗೆ ಮತ್ತೊಂದು ಶಾಕ್ ನೀಡಿದೆ.

ಹೌದು, ಈ ಹಿಂದೆ ಎಸ್.ಬಿ.ಎಂ. ಅನ್ನು ಎಸ್.ಬಿ.ಐ.ನಲ್ಲಿ, ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನ ಮಾಡಲಾಗಿತ್ತು. ಈಗ ಮತ್ತೆ ಕರ್ನಾಟಕದ ಮೂರು ಬ್ಯಾಂಕ್ ವಿಲೀನ ಮಾಡಲಾಗಿದೆ. ರಾಜ್ಯದ ಕೆನರಾ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್‍ಗಳನ್ನು ವಿಲೀನ ಮಾಡಲಾಗಿದೆ. ಕರ್ನಾಟಕದ 2 ಬ್ಯಾಂಕ್‍ಗಳನ್ನು ಕೆನರಾ ಬ್ಯಾಂಕ್ ಜೊತೆ ವಿಲೀನ ಮಾಡಲಾಗಿದೆ. ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ವಿಲೀನವಾಗಿವೆ. ಇನ್ನು ಯುನಿಟೆಡ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಂಧ್ರ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ ವಿಲೀನ ಮಾಡಲಾಗಿದೆ.

LEAVE A REPLY

Please enter your comment!
Please enter your name here