ಆರ್ಥಿಕ ದುರ್ಬಲರಿಗೆ ಕರ್ನಾಟಕದಲ್ಲಿ ಸಿಗುತ್ತಿಲ್ಲ ಕೇಂದ್ರದ ಮೀಸಲಾತಿ..!

0
106

ಕಳೆದ ಲೋಕಸಭಾ ಚುನಾವಣೆಯಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಮೇಲ್ವರ್ಗಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾನೂನು ರೂಪಿಸಿತ್ತು. ಈ ಕಾನೂನಿನ ಮೂಲಕ ದೇಶದಲ್ಲಿರುವ ಎಲ್ಲ ಮೇಲ್ವರ್ಗದ ಬಡವರು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿದ್ದರು. ದೇಶದ ಅನೇಕ ರಾಜ್ಯಗಳು ಈ ಕಾಯ್ದೆಯನ್ನು ಜಾರಿಗೊಳಿಸಿವೆ. ಆದರೆ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಇದನ್ನು ಜಾರಿಗೊಳಿಸಿಲ್ಲ. ಹೀಗಾಗಿ ಈ ರಾಜ್ಯಗಳ ನೀತಿಯನ್ನು ಖಂಡಿಸಿ ವಕೀಲ ಜಿ.ಎಸ್. ಮಣಿ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇನ್ನು ಜಿ.ಎಸ್. ಮಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು, ಈಗ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದ್ದಾರೆ. “ದೇಶದ ಎಲ್ಲ ರಾಜ್ಯಗಳು ಮೀಸಲಾತಿ ಸೌಲಭ್ಯವನ್ನು ನೀಡಿದ್ದರು, ನೀವೇಕೆ ಇನ್ನು ನಿಮ್ಮ ರಾಜ್ಯದಲ್ಲಿ ಕೇಂದ್ರದ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಲ್ಲ..?” ಎಂದು ಪ್ರಶ್ನಿಸಿದೆ.

LEAVE A REPLY

Please enter your comment!
Please enter your name here