ಸಿಇಟಿ ಶುಲ್ಕ ಪಾವತಿಸುವ ಗಡುವು ವಿಸ್ತರಣೆ

0
107

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ, ಸಿಇಟಿ ಮೂರನೇ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ಗಡುವನ್ನು ಒಂದು ವಾರ ವಿಸ್ತರಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಈ ಹಿಂದಿನ ವೇಳಾ ಪಟ್ಟಿಯಂತೆ ಶುಲ್ಕ ಪಾವತಿಗೆ ಆಗಸ್ಟ್ 7 ಕೊನೆಯ ದಿನವಾಗಿತ್ತು. ಇದೀಗ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವುದರಿಂದ ದಿನಾಂಕವನ್ನು ಒಂದು ವಾರ ವಿಸ್ತರಣೆ ಮಾಡಲಾಗಿದೆ.

“ಉತ್ತರ ಕರ್ನಾಟಕದಲ್ಲಿ ಮಳೆಯಿಂದ ತತ್ತರಿಸಿರುವ ಜನ ಗುಳೆ ಎದ್ದಿದ್ದಾರೆ. ಮುಂದಿನ 15 ದಿನಗಳಾದರೂ ಅವರಿಗೆ ಈ ದಿನಾಂಕಗಳನ್ನು ವಿಸ್ತರಿಸಲಿಲ್ಲವೆಂದರೆ ಗಾಯದ ಮೇಲೆ ಬರೆ ಎಳೆದಂತೆ. ನಿರ್ಣಯ ಆದಷ್ಟು ಬೇಗ ಆಗಬೇಕಿದೆ” ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡುವ ಮೂಲಕ ಸರ್ಕಾರ ಗಮನ ಸೆಳೆದಿದ್ದರು.

LEAVE A REPLY

Please enter your comment!
Please enter your name here