ಚಾರ್ಮುಡಿ ಘಾಟ್ ರಸ್ತೆ ಸಂಚಾರ ಬಂದ್.!

0
121

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಲ ಜಿಲ್ಲೆಗಳಲ್ಲಿ ವಿಪರೀತ ಹಾನಿ ಉಂಟಾಗಿದೆ ಎನ್ನಬಹುದು. ಕರಾವಳಿ ಭಾಗದಲ್ಲಿ ಹೆಚ್ಚು ಗಾಳಿ ಸಮೇತ ಸುರಿಯುತ್ತಿರುವ ಮಳೆಗೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತು. ಸದಾ ಹಚ್ಚ ಹಸಿರಿನಿಂದ ಕೂಡಿರುವ ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ವಿರಾಜಪೇಟೆಯ ಮುಖ್ಯ ರಸ್ತೆ ಕುಸಿದು ಹೋಗಿದೆ, ಜೊತೆಗೆ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಈ ಹಿಂದೆಯೇ ರೆಡ್ ಅಲರ್ಟ್ ಘೋಷಣೆ ನೀಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ತಿಳಿಸಿತ್ತು. ಅದೇ ರೀತಿ ಕಾಫಿ ನಾಡು ಚಿಕ್ಕಮಗಳೂರಿಗೂ ಮಳೆಯ ಅವಾಂತರ ತಟ್ಟಿದೆ ಎನ್ನಬಹುದು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿಗೆ ಹೊಂದುವ ಮುಖ್ಯ ಚಾರ್ಮಾಡಿ ಘಾಟ್ ರಸ್ತೆಗೆ ಭಾರೀ ಮಳೆಯಿಂದ ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಲಘು ವಾಹನದಿಂದ ಭಾರಿ ವಾಹನ ಸವಾರರಿಗೆ ಸಂಚರಿಸಲು ಪರದಾಡುವಂತಾಗಿದೆ. ಗುಡ್ಡ ಕುಸಿದಿರುವ ಕಾರಣ ರಸ್ತೆ ಸುತ್ತಮುತ್ತಲಿನ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಗುಡ್ಡ ಕುಸಿದಿರುವ ಸ್ಥಳಕ್ಕೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ ಎಂಬ ವರದಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here