ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಭಿನ್ನ ಸ್ವರೂಪ ಪಡೆದುಕೊಳ್ಳುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಸಚಿವ ಸ್ಥಾನ ವಂಚಿತ ಬಿಜೆಪಿ ಶಾಸಕರುಗಳು ರಾಜ್ಯ ನಾಯಕತ್ವದ ವಿರುದ್ದ ತಿರುಗಿ ಬಿದ್ದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಬೆಳಗಾವಿಯ ಅನೇಕ ಶಾಸಕರು ಸಿಎಂ ಯಡಿಯೂರಪ್ಪ ವಿರುದ್ದ ನೇರವಾಗಿ ಸಮರಕ್ಕಿಳಿದಿದ್ದಾರೆ.

ಇನ್ನು ಕೆಲ ಶಾಸಕರುಗಳು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸಚಿವ ಸ್ಥಾನ ವಂಚಿತ ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರಾ.? ಎಂಬ ಪ್ರಶ್ನೆ ಎದ್ದಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣ ಯಾವ್ಯಾವ ತಿರುವು ಪಡೆಯುತ್ತದೆಂಬುದನ್ನು ಕಾದುನೋಡಬೇಕಿದೆ.

ಈ ಮಧ್ಯೆ ಉಮೇಶ್ ಕತ್ತಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಫೋನ್ ಮೂಲಕ ಮಾತನಾಡಿರುವ ಸಂಗತಿ ಸಿಎಂ ಯಡಿಯೂರಪ್ಪನವರನ್ನು ಬೆಚ್ಚಿಬೀಳಿಸಿದೆ. ಉಮೇಶ್ ಕತ್ತಿ ಜೊತೆಗೆ 7-8 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎನ್ನಲಾಗಿದ್ದು, ಈ ಎಲ್ಲ ಬೆಳವಣಿಗೆಗಳು ರಾಜ್ಯ ರಾಜಕೀಯದ ದಿಕ್ಕು ಬದಲಿಸಲಿವೆ ಎನ್ನಲಾಗಿದೆ.