ಉಪ ಚುನಾವಣೆ ಮುಗಿದಿದ್ದು, ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದೆ. ಇನ್ನು ಕಾಂಗ್ರೆಸ್ 2 ಹಾಗೂ ಬಿಜೆಪಿ 1 ಸ್ಥಾನ ಗಳಿಸಿದೆ. ತೀವ್ರ ಮುಖಭಂಗ ಅನುಭವಿಸಿದ ಕಾಂಗ್ರೆಸ್ ಮುಜುಗರಕ್ಕೀಡಾಗಿದ್ದು ಮಾತ್ರ ಸತ್ಯ.
ಕಾಂಗ್ರೆಸ್ ಕೇವಲ 2 ಸ್ಥಾನ ಗಳಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಇಬ್ಬರು ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ಸೋಲಲು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕಾರಣವಾಗಿದ್ದು, ಅವರ ರಾಜೀನಾಮೆಯನ್ನು ಅಂಗೀಕಾರ ಮಾಡಿ ಎಂದು ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ನಾಸೀರ್ ಹುಸೇನ್, ಹಾಗೂ ಜಿ.ಸಿ.ಚಂದ್ರಶೇಖರ್ ಹೈ ಕಮಾಂಡ್ಗೆ ದೂರು ನೀಡಿದ್ದಾರೆ.
ಇದೀಗ ಈ ನಾಲ್ವರ ವಿರುದ್ಧ ಹೈಕಮಾಂಡ್ ಆಂತರಿಕ ತನಿಖೆ ನಡೆಸಬೇಕೆಂದು ಕೆಪಿಸಿಸಿಗೆ ಸೂಚನೆ ನೀಡಿದೆ ಎನ್ನಲಾಗಿದೆ. ಈ ನಾಲ್ವರು ಚುನಾವಣಾ ಸಮಯದಲ್ಲಿ ಎಷ್ಟು ಕೆಲಸ ಮಾಡಿದ್ದಾರೆ. ಎಲ್ಲೆಲ್ಲಿ ಓಡಾಟ ನಡೆಸಿದ್ದಾರೆ ಎಂಬ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.