ಹೈಕಮಾಂಡ್ ನಿಂದ ಅಭ್ಯರ್ಥಿಗಳ ತೀರ್ಮಾನ: ಡಿ.ಕೆ ಶಿವಕುಮಾರ್

0
68

ಬೆಂಗಳೂರು:’ಮುಂಬರುವ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳಿಗೆ ಅಭ್ಯರ್ಥಿಗಳ ಶಿಫಾರಸ್ಸು ಪಟ್ಟಿಯನ್ನು ಹೈಕಮಾಂಡ್ ಗೆ ನಾವು ಕಳುಹಿಸಿಕೊಡುತ್ತೇವೆ. ಅಂತಿಮ ತೀರ್ಮಾನವನ್ನು ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.ಡಿ.ಕೆ.ರವಿ ಪತ್ನಿ ಕುಸುಮಾ ಕೈ ಪಡೆ ಸೇರಿದ್ದಾರೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರಿಕೊಂಡರು. ಇದೇ ವೇಳೆ ಹನುಮಂತರಾಯಪ್ಪ ಹಾಗೂ ಅವರ ಬೆಂಬಲಿಗರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

 

ಜೊತೆಗೆ ಸಿರಾ ಕ್ಷೇತ್ರದ ಬೇರೆ ಪಕ್ಷದ ಕೆಲ ಮುಖಂಡರೂ ಸಹ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ , ಮಾಜಿ ಡಿಸಿಎಂ ಪರಮೇಶ್ವರ್, ಮಾಜಿ ಸಚಿವ ಜಯಚಂದ್ರ ಸೇರಿದಂತೆ ಹಿರಿಯರ ಸಮ್ಮುಖದಲ್ಲಿ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಬೇಕು ಎಂದು ಶಿಫಾರಸ್ಸು ಮಾಡಲು ಈಗಾಗಲೇ ಅನೇಕ ಚರ್ಚೆ ಮಾಡಿದ್ದೇವೆ. ಇಂದು ದೆಹಲಿಗೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡಲಾಗುವುದು ಎಂದರು.

ಶಿರಾ ಕ್ಷೇತ್ರದಲ್ಲಿ ನಮ್ಮ ಹಿರಿಯ ನಾಯಕ ಜಯಚಂದ್ರ ಅವರು ಕಳೆದ ಚುನಾವಣೆಯಲ್ಲಿ 10 ಸಾವಿರ ಮತಗಳ ಅಂತರದಲ್ಲಿ ಸೊತ್ತಿದ್ದರು. ಈ ಬಾರಿ ಇಡೀ ಜಿಲ್ಲೆ ಒಟ್ಟಾಗಿ ಪಕ್ಷದ ಗೆಲುವಿಗೆ ಶ್ರಮಿಸಲಿದೆ. ಶಿರಾ ಕ್ಷೇತ್ರದ ಪ್ರಮುಖ ನಾಯಕರು ನಮ್ಮ ಸಿದ್ಧಾಂತ ಹಾಗೂ ನಾಯಕತ್ವ ನಂಬಿ ಪಕ್ಷಕ್ಕೆ ಆಗಮಿಸಿದ್ದಾರೆ. ಈ ರಾಜ್ಯದಲ್ಲಿನ ಆಡಳಿತ, ತಮ್ಮ ಕ್ಷೇತ್ರದಲ್ಲಿನ ಅಹಿತಕರ ಘಟನೆಗಳನ್ನು ಕಂಡು ಮುಂದಿನ ದಿನದಲ್ಲಿ ರಾಜ್ಯಕ್ಕೆ ಕಾಂಗ್ರೆಸ್ ಅನಿವಾರ್ಯ ಎಂದು ಅರಿತು 100ಕ್ಕೂ ಹೆಚ್ಚು ಶಿರಾದ ವಕೀಲರು ಹಾಗೂ ನಾಯಕರು ಪಕ್ಷಕ್ಕೆ ಸೇರಿದ್ದಾರೆ. ಇವರ ಸಾವಿರಾರು ಮಂದಿ ಹಿಂಬಾಲಕರು ಪಕ್ಷಕ್ಕೆ ಸೇರಲು ಮುಂದಾಗಿದ್ದಾರೆ. ಎಲ್ಲರನ್ನೂ ಕಾಂಗ್ರೆಸ್ ಕಚೇರಿಗೆ ಕರೆತರಲು ಆಗದ ಕಾರಣ 100 ಮಂದಿ ಮಾತ್ರ ಇಲ್ಲಿಗೆ ಬಂದು ಪಕ್ಷಕ್ಕೆ ಸೇರಿದ್ದಾರೆ ಎಂದರು.

“ಯಾರು ಎಷ್ಟೇ ಕು’ತಂ’ತ್ರ ಮಾಡಿದರೂ ಗೆಲುವು ನಮ್ಮದೇ”

ಸರ್ಕಾರ ಇದೆ ಹೀಗಾಗಿ ಉಪಚುನಾವಣೆ ಗೆಲ್ಲುತ್ತೇವೆ ಎಂದು ಹೇಳುತ್ತಿರುವ ಸಮಯದಲ್ಲಿ ನೂರಾರು ಸ್ಥಳೀಯ ನಾಯಕರು ತಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತಿವೆ ಎಂದರೆ ಇದು ಪ್ರಮುಖ ಬೆಳವಣಿಗೆಯಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ಪಕ್ಷ ಯಾವುದೇ ಕುತಂತ್ರ ಮಾಡಿದರೂ ಇಲ್ಲಿ ಜಯ ನಮ್ಮದು. ಈ ಚುನಾವಣೆ ಟಿ.ಬಿ ಜಯಚಂದ್ರ, ಡಾ.ಜಿ ಪರಮೇಶ್ವರ್, ರಾಜಣ್ಣ ಹಾಗೂ ಚಂದ್ರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ನಾನು, ಸಿದ್ದರಾಮಯ್ಯನವರು ಹಾಗೂ ಪಕ್ಷದ ಇತರ ಹಿರಿಯ ನಾಯಕರು ಇವರ ಜತೆ ಜವಾಬ್ದಾರಿ ಹೊರುತ್ತೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here