ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಏಕಾಂಗಿ ಸೆಣಸಾಟ..?!

0
167

ಮೈತ್ರಿ ಸರ್ಕಾರ ಪತನವಾದ ನಂತರ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಕೊನೆಗೊಂಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ದೋಸ್ತಿಗಳ ಹೊಂದಾಣಿಕೆ ಸರಿಯಾಗಿರಲಿಲ್ಲ. ಇದರಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಭಾರಿ ಹಿನ್ನಡೆ ಅನುಭವಿಸಬೇಕಾಗಿತ್ತು. ಹೀಗಾಗಿ ಎರಡು ಪಕ್ಷಗಳು ಮುಂದೆ ಎದುರಾಗುವ ಉಪಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಒಲವು ತೋರಿವೆ.

ಅದೇ ರೀತಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಕಣಕ್ಕಿಳಿಯಲು ಮುಂದಾಗಿವೆ. ಜೆಡಿಎಸ್ ಕೂಡ ಉಪಚುನಾವಣೆಗೆ ತಯಾರಾಗಿದ್ದು, ಮುಂಬರುವ ಚುನಾವಣೆಗಳಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲಿವೆ ಎಂದು ಹೇಳಲಾಗಿದೆ. ಜೆಡಿಎಸ್ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಅದಾಗಲೇ ದೇವೇಗೌಡರು ಭರ್ಜರಿ ತಯಾರಿ ನಡೆಸಿದ್ದು, ಮುಂಬರುವ ಉಪಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.

LEAVE A REPLY

Please enter your comment!
Please enter your name here