ಕೊರೊನಾ ವಾರಿಯರ್ಸ್ ವೈದ್ಯಕೀಯ ಸಿಬ್ಬಂದಿಗಳಿಗೇ ಮೊದಲು ಕೋವಿಡ್ ಲಸಿಕೆ- ಬೆಂಗಳೂರಲ್ಲೂ ಆರಂಭವಾಯ್ತು ಸಿದ್ಧತೆ

0
71

ಬೆಂಗಳೂರು: ಕೋವಿಡ್ ಲಸಿಕೆ ಸಧ್ಯದಲ್ಲೇ ಬರಬಹುದೆಂಬ ನಿರೀಕ್ಷೆಯಲ್ಲಿ ಬೆಂಗಳೂರಲ್ಲೂ ಈ ಬಗ್ಗೆ ಸಿದ್ಧತೆಗಳನ್ನು ನಡೆಸಲಾಗ್ತಿದೆ. ಲಸಿಕೆಯ ಸಂಗ್ರಹಣೆ ಹಾಗೂ ವಿತರಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರದ ಸೂಚನೆಯಂತೆ ಬಿಬಿಎಂಪಿ ತಯಾರು ಮಾಡಿಕೊಳ್ಳುತ್ತಿದೆ.ಮೊದಲ ಹಂತದಲ್ಲಿ ಆರೋಗ್ಯ ಸಿಬ್ನಂದಿಗಳಿಗೆ ಕೊರೊನಾ ವ್ಯಾಕ್ಸಿನ್ ನೀಡಲಿರುವ ಹಿನ್ನಲೆ, ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಆರೋಗ್ಯ ಅಧಿಕಾರಿಗಳು, ನರ್ಸಿಂಗ್ ಹೋಂ ಅಸೋಸಿಯೇಷನ್ಸ್, ಮೆಡಿಕಲ್ ಕಾಲೇಜು ಪ್ರತಿನಿಧಿಗಳ ಜೊತೆ ಈಗಾಗಲೇ ಪರಿಶೀಲನಾ ಸಭೆ ನಡೆಸಲಾಗಿದ್ದು,ಮಾಹಿತಿಗಳನ್ನೂ ಕಲೆಹಾಕಲಾಗಿದೆ.


ಪ್ರಮುಖವಾಗಿ ವ್ಯಾಕ್ಸಿನ್ ಅನ್ನು ಕೋಲ್ಡ್ ಚೈನ್ ಸಿಸ್ಟಂನಲ್ಲಿ ಇಡಬೇಕಾಗುತ್ತದೆ. ಪಾಲಿಕೆಯಲ್ಲಿರುವ ಕೋಲ್ಡ್ ಚೈನ್ ಸಿಸ್ಟಂ ಲಭ್ಯತೆ ಬಗ್ಗೆ, ಹಾಗೂ ಸಿದ್ಧಪಡಿಸಿಟ್ಟುಕೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಧ್ಯ ದಾಸಪ್ಪ ಆಸ್ಪತ್ರೆಯಲ್ಲಿ ಈ ವ್ಯವಸ್ಥೆ ಇದೆ. ಅಲ್ಲದೆ ಪಾಲಿಕೆ ಬಳಿ 175 ರೆಫ್ರಿಜರೇಟರ್ ಗಳಿವೆ. 150 ಡೀಪ್ ಫ್ರೀಜರ್ ಗಳ ಸಿದ್ಧತೆ, ಹಾಗೂ ಅಗತ್ಯ ಬಿದ್ದರೆ ಹೆಚ್ಚುವರಿ ವ್ಯವಸ್ಥೆಗಳ ಸಿದ್ಧತೆಗೂ ಪಾಲಿಕೆ ಸಜ್ಜಾಗುತ್ತಿದೆ.

ಬೆಂಗಳೂರು ವ್ಯಾಪ್ತಿಯ ವೈದ್ಯಕೀಯ ಸಂಸ್ಥೆಗಳಾದ ಕ್ಲಿನಿಕ್, ರೆಫರಲ್ ಆಸ್ಪತ್ರೆ, ನರ್ಸಿಂಗ್ ಹೋಂ, ಹೆರಿಗೆ ಆಸ್ಪತ್ರೆ, ಅಂಗನವಾಡಿ ಕೇಂದ್ರಗಳು, ಮೆಡಿಕಲ್ ಕಾಲೇಜ್, ನರ್ಸಿಂಗ್ ಕಾಲೇಜ್, ಪ್ಯಾರ ಮೆಡಿಕಲ್ ಕಾಲೇಜು ಸೇರಿದಂತೆ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳ ವಿವರ ದಾಖಲಿಸಬೇಕಾಗುತ್ತದೆ.

ಈಗಾಗಲೇ ಶೇ.೩೩ ರಷ್ಟು ವೈದ್ಯಕೀಯ ಸಂಸ್ಥೆಗಳು ಸಿಬ್ಬಂದಿಗಳ ವಿವರವನ್ನು ಪಾಲಿಕೆ ಪೋರ್ಟಲ್ ಗೆ ದಾಖಲಿಸಿದ್ದಾರೆ. ಇನ್ನುಳಿದ ೬೮% ಮಾಡಬೇಕಾಗಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

4270 ವೈದ್ಯಕೀಯ ಸಂಸ್ಥೆಗಳು ನೋಂದಾಯಿಸಿಕೊಂಡಿವೆ. ಪಾಲಿಕೆ ನೀಡುವ ವಿವರಗಳ ಅನುಸಾರವಾಗಿ ಕೇಂದ್ರ ಸರ್ಕಾರ ವ್ಯಾಕ್ಸಿನ್ ಬಿಡುಗಡೆ ಮಾಡಲಿದೆ. ನ.೨೧ ರೊಳಗೆ ಮಾಹಿತಿ ಕೊಡಬೇಕಾಗಿದೆ. 94 ಸಾವಿರ ಸಿಬ್ಬಂದಿಗಳಿಗೆ ಮೊದಲ ಹಂತದಲ್ಲಿ ವ್ಯಾಕ್ಸಿನ ನೀಡುವ ಬಗ್ಗೆಯೂ ಸೂಚನೆ ಸಿಕ್ಕಿದೆ.

ಇದರಲ್ಲಿ ಡೆಂಟಲ್ , ಮೆಡಿಕಲ್ , ಪ್ಯಾರಾ ಮೆಡಿಕಲ್ ಸ್ಟಾಫ್ ಸೇರಿದಂತೆ ಒಟ್ಟು 74 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ. 4350 ಖಾಸಗಿ ಆಸ್ಪತ್ರೆ ಗಳಿವೆ ಅವರ ಸಿಬ್ಬಂದಿಗಳಿಗೂ ವ್ಯಾಕ್ಸಿನ್ ಹಾಗೂ 1800 ಅಂಗನವಾಡಿ ಸಿಬ್ಬಂದಿಗಳಿಗೆ ವ್ಯಾಕ್ಸಿನ್ ನೀಡುವ ಬಗ್ಗೆ, ಈಗಾಗಲೇ ಮಾಹಿತಿ ಕಲೆಹಾಕಲಾಗಿದೆ.

ಬಿಬಿಎಂಪಿ ಜೊತೆಗೆ ಆರೋಗ್ಯ ಇಲಾಖೆ, ಪಶುಸಂಗೋಪನೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಒಟ್ಟಿಗೆ ಸೇರಿ ವ್ಯಾಕ್ಸಿನ್ ಕೊಡೋದಕ್ಕೆ ಸಿಬ್ಬಂದಿ ಸಿದ್ದತೆ ಮಾಡಿಕೊಳ್ಳಲಾಗಿದೆ.

ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.

ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.

BUY NOW
ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ

LEAVE A REPLY

Please enter your comment!
Please enter your name here