ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಎಸ್. ಷಡಕ್ಷರಿ

0
233

ನಿನ್ನೆ ನಡೆದ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದ ಚುನಾವಣೆಯಲ್ಲಿ ಸಿ.ಎಸ್. ಷಡಕ್ಷರಿ ಜಯಗಳಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿ ಆವರಣದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಮತದಾನ ನಡೆದಿತ್ತು. ಅಂತಿಮವಾಗಿ ಪ್ರಕಟವಾದ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷರಾಗಿದ್ದ ಸಿ.ಎಸ್. ಷಡಕ್ಷರಿ ಕೇಂದ್ರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅತಿ ಕಿರಿಯ ವಯಸ್ಸಿನಲ್ಲೇ ಸಿ.ಎಸ್. ಷಡಕ್ಷರಿ ಅವರು ಸಂಘದ ಅಧ್ಯಕ್ಷ ಗಾದಿಗೇರಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಕೇಂದ್ರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಷಡಕ್ಷರಿ 256 ಮತಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರು.

LEAVE A REPLY

Please enter your comment!
Please enter your name here