ಡಿಕೆಶಿಗೆ ಮುಳುವಾಯ್ತಾ ಕಾಂಗ್ರೇಸ್ ಅಧ್ಯಕ್ಷ ಗಾದಿ…? ಸಿಬಿಐ ದಾಳಿಯ ಸೂತ್ರದಾರ ಯಾರು ಗೊತ್ತಾ..?

0
110

ರಾಜ್ಯ ಕಾಂಗ್ರೆಸ್‍ನ ಪ್ರಭಾವಿ ನಾಯಕ ಮತ್ತು ಒಕ್ಕಲಿಗ ಸಮುದಾಯದ ಪ್ರಮುಖ ನೇತಾರನಾಗಿ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಸಿಬಿಐ ದಾಳಿ ನಡೆಸಿದೆ. 60ಕ್ಕೂ ಹೆಚ್ಚು ಅಧಿಕಾರಿಗಳು ಸದಾಶಿವನಗರ, ಕನಕಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್‍ರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಸಿಬಿಐ ಅಧಿಕಾರಿಗಳು ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿ, ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಭಾರೀ ಶಾಕ್ ನೀಡಿದೆ. ಉಪಚುನಾವಣೆಯ ಭರ್ಜರಿ ತಯಾರಿಯಲ್ಲಿದ್ದ ರಾಜ್ಯ ಕಾಂಗ್ರೆಸ್‍ಗೆ ಈ ದಾಳಿ ಸಂಕಷ್ಟಕ್ಕೆ ಸಿಲುಕಿದೆ.


ಹೌದು, ಆರ್.ಆರ್.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆದ್ದು ತನ್ನ ಶಕ್ತಿ ಸಾಮಥ್ರ್ಯವನ್ನು ಸಾಬೀತುಪಡಿಸುವ ಉಮೇದಿಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ಗೆ ಈ ದಾಳಿ ಭಾರೀ ಹಿನ್ನಡೆಯನ್ನುಂಟು ಮಾಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಚುನಾವಣೆಯ ತಂತ್ರಗಾರಿಕೆಗಾಗಿ ಡಿಕೆ ಸಹೋದರರನ್ನೇ ಹೆಚ್ಚಾಗಿ ನಂಬಿಕೊಂಡಿದ್ದಾರೆ. ಒಂದೊಮ್ಮೆ ಡಿಕೆ ಸಹೋದರರು ಮತ್ತೆ ಜೈಲು ಸೇರಿದ್ರೆ ರಾಜ್ಯ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಲಿದೆ.
ಇನ್ನು ಈ ದಾಳಿಯ ಹಿಂದೆ ರಾಜಕೀಯ ದುರುದ್ದೇಶವಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಉಪಚುನಾವಣೆಯ ಹೊಸ್ತಿಲಲ್ಲೇ ದಾಳಿ ನಡೆದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬಿಜೆಪಿಯೊಂದಿಗೆ ಕೆಲ ಕಾಂಗ್ರೆಸ್ ನಾಯಕರು ಒಳ ಒಪ್ಪಂದವನ್ನು ಮಾಡಿಕೊಂಡು ಡಿಕೆಶಿಯನ್ನು ರಾಜಕೀಯವಾಗಿ ಹಣಿಯುವ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಮೇಲಿನ ದಾಳಿಯ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕೈವಾಡ ಇದೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ನಡೆದ ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಸಿಬಿಐ ದಾಳಿಯನ್ನು ಖಂಡಿಸುತ್ತೇನೆ, ಇದು ರಾಜಕೀಯ ಪ್ರೇರಿತ ದಾಳಿ. ವಿಧಾನಸಭಾ ಉಪ ಚುನಾವಣೆಗೆ ನಾವು ಮಾಡಿಕೊಂಡ ತಯಾರಿಯ ದಾರಿ ತಪ್ಪಿಸುವ ಉದ್ದೇಶ ಸಿಬಿಐ ದಾಳಿಯ ಹಿಂದಿದೆ” ಎಂದು ಸಿದ್ದರಾಮ್ಯಯ ಆರೋಪ ಮಾಡಿದ್ದಾರೆ.

ಡಿ. ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು 2019ರ ಸೆಪ್ಟೆಂಬರ್ 25ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿತ್ತು. ಈ ತನಿಖೆಗೆ ತಡೆ ನೀಡುವಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿತ್ತು. ಅರ್ಜಿ ವಜಾವನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ರಾಜ್ಯ ಹೈಕೋರ್ಟ್‍ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್‍ನಲ್ಲಿ ನಡೆಯಬೇಕಿದೆ. ಅಷ್ಟರಲ್ಲಿಯೇ ಸಿಬಿಐ ದಾಳಿಯಾಗಿದೆ.

LEAVE A REPLY

Please enter your comment!
Please enter your name here