ಅಡ್ಮಿಟ್ ಇಲ್ಲದಿದ್ರೆ ಜೈಲು…! ಏನಿದು ಡಿಕೆಶಿ ಹಣೆ ಬರಹ…?

0
416

ಇಡಿ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟಗಳ ಸರಮಾಲೆ ಮುಂದುವರೆದಿದೆ. ಇಂದು ಡಿಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇನ್ನು ಡಿಕೆ ಶಿವಕುಮಾರ್ ಪರ ವಾದ ಮಂಡಿಸಿದ ಸಿಂಘ್ವಿ ಡಿಕೆ ಶಿವಕುಮಾರ್ ಬಿಪಿ, ಶುಗರ್, ಥೈರಾಲ್ಡ್ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಅವರಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ. ಅವರಿಗೆ ಜಾಮೀನು ನೀಡಬೇಕೆಂದು ವಾದಿಸಿದರು.

ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಇಡಿ ಪರ ವಕೀಲ ನಟರಾಜ್ ಡಿಕೆ ಶಿವಕುಮಾರ್ ಅನೇಕ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇವರ ನಿಯಂತ್ರಣದಲ್ಲಿ ಅನೇಕ ಸ್ಥಳಗಳಿದ್ದು ಕ್ರಿಮಿನಲ್ ಒಳಸಂಚಿನಲ್ಲಿ ಭಾಗಿಯಾಗಿದ್ದಾರೆ. ಸುಮಾರು ೩೧೭ ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದು, ೨೦೦ ಕೋಟೆ ರೂಪಾಯಿ ಅಕ್ರಮ ವ್ಯವಹಾರ ನಡೆಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿ ಸಾಕ್ಷ್ಯಗಳನ್ನು ನಾಶ ಪಡಿಸುವಷ್ಟು ಬಲಿಷ್ಠನಾಗಿದ್ದು, ಆರೋಪಿಗೆ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಸುಧಿರ್ಘ ವಾದ- ಪ್ರತಿವಾದ ಆಲಿಸಿದ ನ್ಯಾಯಧೀಶರು ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. ಆದರೆ ೧೪ ದಿನಗಳ ಕಾಲ ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನು ಡಿಕೆ ಶಿವಕುಮಾರ್ ಅವರ ಆರೋಗ್ಯ ತೀವ್ರವಾಗಿ ಹಸಗೆಟ್ಟಿರುವುದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಅವರನ್ನು ಸದ್ಯ ಆಸ್ಪತ್ರೆಗೆ ಸೇರಿಸಿದರು, ಡಿಸ್ಟಾರ್ಜ್ ಆದ ನಂತರ ಜೈಲು ವಾಸ ಅನುಭವಿಸಬೇಕಾಗುತ್ತದೆ.

LEAVE A REPLY

Please enter your comment!
Please enter your name here