ಡಿಕೆ ಶಿವಕುಮಾರ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ರಾಜ್ಯ ಹೈಕೋರ್ಟ್..!

0
262

ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಇಡಿ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿರುವ ಹೊತ್ತಿನಲ್ಲೇ, ಇದೀಗ ರಾಜ್ಯ ಹೈಕೋರ್ಟ್ ಡಿಕೆ ಶಿವಕುಮಾರ್‍ಗೆ ಮೊತ್ತೊಂದು ಶಾಕ್ ನೀಡಿದೆ. ಈ ಹಿಂದೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದಾಗ, ಡಿಕೆ ಶಿವಕುಮಾರ್ ಅವರ ನವದೆಹಲಿ ನಿವಾಸದಲ್ಲಿ ಸಿಕ್ಕ 8.69 ಕೋಟಿ ರೂಪಾಯಿ ಅಕ್ರಮ ಹಣ ಸಂಬಂಧ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ರದ್ದುಗೊಳಿಸುವ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‍ನ ವಿಭಾಗೀಯ ಪೀಠ ಇಡಿ ನೀಡಿರುವ ಸಮನ್ಸ್ ಅನ್ನು ರದ್ದು ಮಾಡುವುದಕ್ಕೆ ನಕಾರ ವ್ಯಕ್ತಪಡಿಸಿದೆ. ಹೀಗಾಗಿ ಡಿಕೆಶಿ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ.ಪಿ.ಎಂ. ನವಾಜ್ ಅವರಿದ್ದ ಪೀಠ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಮಂಗಳವಾರಕ್ಕೆ ವಿಚಾರಣೆ ಮುಂದೂಡಿ ಆದೇಶ ಕಾಯ್ದಿರಿಸಿತು. ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ, ಸುನಿಲ್ ಕುಮಾರ್ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯ್ದೆ-1961ರ ಕಲಂ 277 ಮತ್ತು 278 ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 120 ಬಿ, 193 ಹಾಗೂ 199ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ಇನ್ನು ಇದೇ ವೇಳೆ ನ್ಯಾಯಾಪೀಠ, ರಾಜೇಂದ್ರ ಸುನಿಲ್ ಕುಮಾರ್ ಶರ್ಮ, ಸಚಿನ್ ನಾರಾಯಣ ಆಂಜನೇಯ, ಹನುಮಂತಯ್ಯ ಅವರನ್ನು ನಾಲ್ಕು ತಿಂಗಳು ಕಾಲ ಬಂಧನ ಮಾಡದಂತೆ ಆದೇಶ ನೀಡಿದೆ. ಆದರೆ ಇಡಿ ಮುಂದೆ ವಿಚಾರಣೆಗೆ ಹಾಜರು ಆಗುವಂತೆ ಷರತ್ತು ವಿಧಿಸಿದೆ. ಈ ಎಲ್ಲ ಬೆಳವಣಿಗೆಗಳು ಇಡಿ ವಿಚಾರಣೆಗೆ ಹೊಸ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಇಡಿ ವಿಚಾರಣೆ ತೀವ್ರಗೊಳ್ಳಲಿದ್ದು, ಮತ್ತಷ್ಟು ಮಾಹಿತಿ ಬಹಿರಂಗಗೊಳ್ಳಲಿದೆ.

LEAVE A REPLY

Please enter your comment!
Please enter your name here