ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಜೆಡಿಎಸ್ನ ಮೂವರು ಅನರ್ಹ ಶಾಸಕರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಿ ವರಿಷ್ಠರಾದ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರನ್ನು ಉಚ್ಚಾಟಿಸಲಾಗಿದೆ. ಹುಣಸೂರು ಶಾಸಕ ಎಚ್. ವಿಶ್ವನಾಥ್, ಮಹಾಲಕ್ಷ್ಮಿ ಲೇ ಔಟ್ ಶಾಸಕ ಕೆ. ಗೋಪಾಲಯ್ಯ, ಕೆ.ಆರ್. ಪೇಟೆ ಶಾಸಕ ಕೆ.ಸಿ. ನಾರಾಯಣಗೌಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.