ಕಾಂಗ್ರೆಸ್‍ಗೆ ಸ್ಪಷ್ಟ ಸಂದೇಶ ರವಾನಿಸಿದ ದೇವೇಗೌಡರು..!

0
202

ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ರಾಜ್ಯ ಕಾಂಗ್ರೆಸ್ಸಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ‘ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಗಿದ ಅಧ್ಯಾಯ’ ಎಂದಿರುವ ದೇವೇಗೌಡರು, ಭವಿಷ್ಯದಲ್ಲಿ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಕಾರ್ಯಕರ್ತರ ಸಭೆಯ ನಂತರ ಘೋಷಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಚುನಾವಣೆ ಯಾವಾಗಲಾದರೂ ಎದುರಾಗಬಹುದು, ಕಾರ್ಯಕರ್ತರು ಮತ್ತು ಮುಖಂಡರು ಸಜ್ಜಾಗಿರಬೇಕು. ಜೆಡಿಎಸ್ ಪಕ್ಷದ ಬಲವೃದ್ದನೆಗೆ ಏಕಾಂಗಿಯಾಗಿ ಸ್ಪರ್ಧಿಸುವುದೇ ಸೂಕ್ತ ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಒಲವು ವ್ಯಕ್ತವಾಗಿದ್ದು, ಮೈತ್ರಿ ಮಾಡಿಕೊಳ್ಳದ ತೀರ್ಮಾನಕ್ಕೆ ಬರಲಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ. ಕುಮಾರಸ್ವಾಮಿ ಅವರ ನೇತೃತ್ವದ ಸರಕಾರದ ಹದಿನಾಲ್ಕು ತಿಂಗಳ ಸಾಧನೆಗಳನ್ನು ಮನೆಮನೆಗೆ ತಲುಪಿಸುವಂತೆ ದೇವೇಗೌಡರು ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here