ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊಣೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸಿದ್ದು ವಿರುದ್ದ ನೇರ ವಾಗ್ದಾಳಿ ನಡೆಸಿದ್ದಾರೆ.
ಸುವರ್ಣ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಮಾತನಾಡಿರುವ ದೇವೇಗೌಡರು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಸಿದ್ದರಾಮಯ್ಯನವರಿಗೆ ಸುತಾರಾಂ ಇಷ್ಟವಿರಲಿಲ್ಲ. ಹೀಗಾಗಿ ಸರ್ಕಾರವನ್ನು ಸದಾ ಕಾಲ ಸಂಕಷ್ಟಕ್ಕೆ ದುಡುವ ಪ್ರಯತ್ನ ನಡೆಸಿದ್ರು. ಇನ್ನು ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಪ್ರಾಮಾಣಿಕ ಪ್ರಯತ್ನ ನಡೆಸಲಿಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳಿವೆ ಎಂದರು.

ಇನ್ನು ಸದನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ಪ್ರದರ್ಶನ ಮಾಡಿ ಯಡಿಯೂರಪ್ಪನವರಿಗೆ ನೀಡಿದರು, ಅದನ್ನು ನೋಡಿದ ಯಡಿಯೂರಪ್ಪ ಮರಳಿ ಸ್ಪೀಕರ್ಗೆ ಪತ್ರವನ್ನು ನೀಡಿದ್ರು. ಅದರ ಅರ್ಥ ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ತಾವು ಪ್ರತಿಪಕ್ಷ ನಾಯಕರಾಗಬಹುದು ಎಂಬುದು ಸಿದ್ದರಾಮಯ್ಯ ಅವರ ಲೆಕ್ಕಾಚಾರ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಬಾರದು ಎಂಬ ಕಾರಣಕ್ಕಾಗಿ ಕುತಂತ್ರ ರಾಜಕಾರಣ ನಡೆಸಿದ್ದಾರೆ ಎಂದೂ ಗೌಡರು ಗುಡುಗಿದರು

ಇನ್ನು ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಮೊದಲಿನಿಂದಲೂ ತಿಕ್ಕಾಟ ಇತ್ತು. ಕಾಂಗ್ರೆಸ್ನ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕೆಲವು ದೆಹಲಿಯ ಪ್ರಮುಖರು ಮಾತ್ರ ಕುಮಾರಸ್ವಾಮಿ ಅವರೇ ಐದು ವರ್ಷ ಮುಖ್ಯಮಂತ್ರಿ ಎಂದು ಪತ್ರ ಬರೆದು ಕೊಟ್ಟಿದ್ದರು. ಆದರೆ ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿತು.
ಸರ್ಕಾರ ಪತನವಾಗಲು ಇದೇ ಪ್ರಮುಖ ಕಾರಣ. ಯಡಿಯೂರಪ್ಪ ಸಿಎಂ ಆದ್ರೆ ತಾವು ಪ್ರತಿಪಕ್ಷ ನಾಯಕರಾಗಬಹುದು ಎಂಬುದು ಸಿದ್ದು ಲೆಕ್ಕಾಚಾರ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಬಾರದು ಎಂಬ ಕಾರಣಕ್ಕಾಗಿ ಕುತಂತ್ರ ರಾಜಕಾರಣ ನಡೆಸಿದು.್ರ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ನೇತೃತ್ವದ ಆಡಳಿತಾವಧಿಯಲ್ಲಿ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ ಎಂಬ ಕೋಪ ಸಿದ್ದರಾಮಯ್ಯ ಮನದಲ್ಲಿ ಇದೆ ಎಂದರು.