‘ಉಪಚುನಾವಣೆ ನಡೆಯೋದೆ ಡೌಟು’ ಹೊಸ ಬಾಂಬ್ ಸಿಡಿಸಿದ ದೇವೇಗೌಡರು..!

0
483

ರಾಜ್ಯದಲ್ಲಿ ಉಪಚುನಾವಣೆಗೆ ತಯಾರಿ ನಡೆದಿರುವ ಮಧ್ಯೆಯೇ ಜೆಡಿಎಸ್ ವರಿಷ್ಠರಾದ ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜಕೀಯ ಚದುರಂಗದಾಟದಲ್ಲಿ ದೇವೇಗೌಡರು ಆಡುವ ಒಂದೊಂದು ಮಾತಿಗೂ ಅನೇಕ ಗುಡಾರ್ಥಗಳಿರುತ್ತವೆ. ಇದೀಗ ಎಚ್.ಡಿ. ದೇವೇಗೌಡರು ಸಿಡಿಸಿರುವ ಹೊಸ ಬಾಂಬ್ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಹೌದು, ಮೈತ್ರಿ ಸರ್ಕಾರ ಪತನಗೊಳಿಸಿ ‘ಅನರ್ಹಗೊಂಡ 17 ಶಾಸಕರ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುವುದೇ ಡೌಟು.

ದೇಶದ ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ” ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ದೇವೇಗೌಡರ ಈ ಮಾತು ಇದೀಗ ಅನೇಕ ರಾಜಕೀಯ ಲೆಕ್ಕಾಚಾರಗಳಿಗೆ ಎಡೆಮಾಡಿಕೊಟ್ಟಿದೆ. ಮಂಡ್ಯದ ಕೆ.ಆರ್. ಪೇಟೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಲೆಕ್ಕಾಚಾರವೇ ಬೇರೆ.

ದೇಶದ ಇತರೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆದರೆ ಯಾರೂ ಅಚ್ಚರಿಪಡಬೇಕಿಲ್ಲ. ಹೀಗಾಗಿ ಮಧ್ಯಂತರ ಚುನಾವಣೆ ನಡೆದರೂ ಜೆಡಿಎಸ್ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಿರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇನ್ನು ಕಳೆದ ಬಾರಿ ಎಚ್.ಡಿ. ಕುಮಾರಸ್ವಾಮಿ ಅವರು ನನ್ನ ಮಾತು ಕೇಳದೆ, ಮುಂಬೈವಾಲಾ ನಾರಾಯಣಗೌಡನಿಗೆ ಟಿಕೆಟ್ ಕೊಟ್ಟರು. ಗೆದ್ದು ಶಾಸಕನಾದ ನಂತರ ಜೆಡಿಎಸ್ ಪಕ್ಷಕ್ಕೆ ನಾರಾಯಣಗೌಡ ದ್ರೋಹ ಮಾಡಿದ.

ಹೀಗಾಗಿ ಈ ಬಾರಿ ಸ್ಥಳೀಯ ಅಭ್ಯರ್ಥಿಯನ್ನೇ ಜೆಡಿಎಸ್‍ನಿಂದ ಕಣಕ್ಕಿಳಿಸುತ್ತೇವೆ. ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ಗೆಲ್ಲಿಸಿ ಹೊಸ ಇತಿಹಾಸ ನಿರ್ಮಿಸುತ್ತೇವೆ. ಇದು ನನ್ನ ಶಪಥ ಎಂದು ದೇವೇಗೌಡರು ಘೋಷಿಸಿದರು.

LEAVE A REPLY

Please enter your comment!
Please enter your name here