ಸಂಸದ ತೇಜಸ್ವಿ ಸೂರ್ಯ ಅವರನ್ನು ಹೊಗಳಿದ ದೇವೇಗೌಡರು..!

0
496

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಹೊಗಳುವ ಮೂಲಕ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರು ಅಚ್ಚರಿ ಮೂಡಿಸಿದ್ದಾರೆ. ರಾಜಕೀಯ ಮರೆತು ಸಂಸದ ತೇಜಸ್ವಿ ಸೂರ್ಯ ಅವರ ಬದ್ದತೆಯನ್ನು ಎಚ್.ಡಿ.ದೇವೇಗೌಡರು ಹಾಡಿ ಹೊಗಳಿದ್ದಾರೆ. ದೇವೇಗೌಡರ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.

ಹೌದು, ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯುವ ಅವಶ್ಯಕತೆ ಇಲ್ಲ. ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರದ ಅಗತ್ಯವಿಲ್ಲ, ಪ್ರಧಾನಿ ಮೋದಿ ರಾಜ್ಯಗಳಿಗೆ ಹೆಚ್ಚಿನ ಅನುದಾನ ಸಿಗುವಂತೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇನ್ನು ತೇಜಸ್ವಿ ಸೂರ್ಯ ನೀಡಿದ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಾತನಾಡಿರುವ ದೇವೇಗೌಡರು, ಸಂಸದ ತೇಜಸ್ವಿ ಸೂರ್ಯ ಅವರ ಬದ್ಧತೆ ಇಷ್ಟವಾಯಿತು. ಅವರಿಗೆ ರಾಜ್ಯದ ಜನರ ಬಗ್ಗೆ ಇರುವ ಕಾಳಜಿ ನನಗೆ ಮೆಚ್ಚುಗೆಯಾಗಿದೆ.

ರಾಜ್ಯದ ಉದಯೋನ್ಮುಖ ರಾಜಕೀಯ ನಾಯಕರಿಗೆ ಇಂತಹ ಭಾವನೆ ಇರಬೇಕಾಗಿರುವುದು ಅಗತ್ಯ. ಪಕ್ಷ ಯಾವುದಾದರೂ ಇರಲಿ, ಒಳ್ಳೆಯ ಕೆಲಸಗಳನ್ನು ಶ್ಲಾಘಿಸಬೇಕು ಎಂದು ಹಾಡಿ ಹೊಗಳಿದ್ದಾರೆ. ಇನ್ನು ಸಿಎಂ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಟೀಕಿಸಿದ ದೇವೇಗೌಡರು, ಸಿಎಂ ಯಡಿಯೂರಪ್ಪ ಅವರಿಗೆ ರಾಜ್ಯದ ಜನರ ಪರವಾಗಿ ಬದ್ಧತೆ ಇಲ್ಲ. ಅವರಿಗೆ ಮುಖ್ಯಮಂತ್ರಿ ಕುರ್ಚಿಯ ಮೇಲೆ ಚಿಂತೆ ಇದೆ. ಖುರ್ಚಿ ಉಳಿಸಿಕೊಳ್ಳಲು ಅವರು ಪರದಾಡುತ್ತಿದ್ದಾರೆ. ಹೀಗಾಗಿ ಅವರಿಂದ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.

LEAVE A REPLY

Please enter your comment!
Please enter your name here