ದೇವೇಗೌಡರ ಎದುರೇ ಬಡಿದಾಡಿಕೊಂಡ ಜೆಡಿಎಸ್ ಮುಖಂಡರು..!

0
236

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಮುಖಂಡರಿಬ್ಬರ ಮಾತಿನ ವಾಗ್ವಾದ ಬಡಿದಾಡಿಕೊಳ್ಳುವ ಮಟ್ಟಕ್ಕೆ ಹೋದ ಘಟನೆ ನಡೆದಿದೆ. ಹೌದು, ಕೊಡಗು ಜಿಲ್ಲಾ ಜೆಡಿಎಸ್ ಘಟಕದ ಮುಖಂಡರು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರ ಸಮ್ಮುಖದಲ್ಲೇ ಬಡಿದಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ಭವನದಲ್ಲಿ ನಡೆದಿದೆ. ಇನ್ನು ಮುಖಂಡರ ನಡುವಿನ ಜಗಳ ತೀವ್ರ ಸ್ವರೂಪ ಪಡೆದ ಹಿನ್ನಲೆ ಎಚ್.ಡಿ. ದೇವೇಗೌಡರು ಸಭೆಯಿಂದಲೇ ಅರ್ಧಕ್ಕೆ ಹೊರನಡೆದಿದ್ದಾರೆ. ಈ ಬೆಳವಣಿಗೆ ಜೆಡಿಎಸ್ ಮುಖಂಡರಿಗೆ ಭಾರೀ ಮುಜುಗರ ಉಂಟು ಮಾಡಿದೆ.

ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಯಾಗಿ ಚರ್ಚಿಸಲು ಜೆಪಿ ಭವನದಲ್ಲಿ ಸಭೆ ಕರೆಯಲಾಗಿತ್ತು. ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ, ಕೊಡಗು ಜಿಲ್ಲೆಯ ಜೆಡಿಎಸ್ ಪಕ್ಷದ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಕೊನೆಗೆ ಬಡಿದಾಡಿಕೊಳ್ಳುವ ಮಟ್ಟಕ್ಕೂ ಜಗಳ ಹೋಯಿತು. ಹೀಗಾಗಿ ಖುದ್ದು ದೇವೇಗೌಡರೇ ಸಭೆಯಿಂದ ಹೊರ ನಡೆದರು.

ಇನ್ನು ನಾವು ಪಕ್ಷಕ್ಕೆ ನಿಷ್ಠೆಯಿಂದ ದುಡಿದರೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ನಿಮ್ಮ ಜೊತೆ ಇರುವ ಕೆಲ ನಾಯಕರು ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಪಕ್ಷಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ಕೆಲ ಮುಖಂಡರ ಬೆಂಬಲಿಗರು ವಿರೋಧಿಸಿದ್ದರಿಂದ ಗದ್ದಲ ಆರಂಭವಾಗಿದೆ. ಮುಖಂಡರ ನಡುವಿನ ಮಾತಿನ ಸಮರ ತೀವ್ರ ಸ್ವರೂಪವಾಗಿ ಮುಂದುವರೆದಿದ್ದರಿಂದ ಸಭೆಯನ್ನು ಅರ್ಧಕ್ಕೆ ಮೊಟಲುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here