ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕ್ರಿಕೆಟಿಗ ಎಂ.ಎಸ್. ಧೋನಿ ಅಲ್ಲಿ ಸೈನಿಕರೊಡನೆ ವಾಲಿಬಾಲ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸದ್ಯಕ್ಕೆ ಕ್ರಿಕೆಟ್ನಿಂದ ಬಿಡುವು ಪಡೆದಿರುವ ಧೋನಿ ಕಾಶ್ಮೀರದ ಕಣಿವೆಯಲ್ಲಿ ವಿಕ್ಟರ್ ಫೋರ್ಸ್ ತಂಡದಲ್ಲಿ ಆಗಸ್ಟ್ 15ರವರೆಗೆ ಕಾರ್ಯನಿರ್ವಹಿಸಲಿದ್ದಾರೆ.

ಪ್ಯಾರಾಶೂಟ್ ರೆಜಿಮೆಂಟ್ನಲ್ಲಿ ಗೌರವಾನ್ವಿತ ಲೆಫ್ಟಿನೆಂಟ್ ಕರ್ನಲ್ ಆಗಿರುವ ಧೋನಿ ಪ್ಯಾಟ್ರೋಲಿಂಗ್ ಹಾಗೂ ಗಾರ್ಡ್ ಹಾಗೂ ಪೋಸ್ಟ್ ಕೆಲಸ ಮಾಡುತ್ತಿದ್ದಾರೆ. ಅವರು ಮುಂದಿನ ವರ್ಷ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ವಿರುದ್ಧ ನಡೆಯುವ ಟಿ20 ಪಂದ್ಯಗಳಿಗೆ ವಾಪಸ್ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
