ಚಿರಂಜೀವಿ ಅಳಿಯ ಕಲ್ಯಾಣ್ ದೇವ್ ಜೊತೆ ನಟಿಸುತ್ತಿರುವ ಡಿಂಪಲ್ ಕ್ವೀನ್

0
148

ಕನ್ನಡದ ಎಷ್ಟೋ ನಟ-ನಟಿಯರು ತೆಲುಗಿಗೆ ಹಾಗೂ ತೆಲುಗಿನ ಬಹಳಷ್ಟು ನಟ-ನಟಿಯರು ಕನ್ನಡಕ್ಕೆ ಬಂದಿದ್ದಾರೆ. ಇದೀಗ ಕನ್ನಡದ ನಾಯಕಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹಾಗೂ ತೆಲುಗು ನಾಯಕ ಕಲ್ಯಾಣ್ ದೇವ್ ಜೊತೆ ಸೇರಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

 

 

ಈ ಸಿನಿಮಾಗೆ ‘ದಿಸ್ ಪ್ರಾಪರ್ಟಿ ಬಿಲಾಂಗ್ಸ್ ಟು ಮೀನಾಕ್ಷಿ’ ಎಂದು ಹೆಸರಿಟ್ಟಿದ್ದು ಈಗಾಗಲೇ ಚಿತ್ರದ ಮೊದಲ ಶೆಡ್ಯೂಲ್ ಮುಗಿದಿದೆ. ವಿಶೇಷ ಎಂದರೆ ಕಲ್ಯಾಣ್ ದೇವ್, ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ. ಈ ಸಿನಿಮಾಗಾಗಿ ಹೈದರಾಬಾದ್, ವಿಶಾಖಪಟ್ಟಣಂ, ಚಿಕ್ಕಮಗಳೂರು, ಬೆಂಗಳೂರು ಹಾಗೂ ಇನ್ನಿತರ ಕಡೆ ಶೂಟಿಂಗ್ ಮಾಡಲಾಗುತ್ತಿದೆ.

 

 

ತಂದೆ-ಮಗಳ ಬಾಂಧವ್ಯದ ಕಥೆ ಹೊಂದಿರುವ ಈ ಸಿನಿಮಾವನ್ನು ರಿಜ್ವಾನ್ ಎಂಟರ್‍ಟೈನ್ಮೆಂಟ್ ಬ್ಯಾನರ್ ಅಡಿ, ರಿಜ್ವಾನ್ ಹಾಗೂ ಖುಷಿ ನಿರ್ಮಾಣ ಮಾಡುತ್ತಿದ್ದಾರೆ. ಜಿ. ಶ್ರೀನಿವಾಸ್ ಈ ಚಿತ್ರಕ್ಕೆ ಸಹ ನಿರ್ಮಾಪಕರು. ಕಥೆ, ಚಿತ್ರಕಥೆ ಬರೆದು ಪುಲಿ ವಾಸು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

 

 

ಖ್ಯಾತ ಸಂಗೀತ ನಿರ್ದೇಶಕ ಎಸ್.ಎಸ್. ತಮನ್ ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಸಿನಿಮಾ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲೂ ತಯಾರಾಗುತ್ತಿದ್ದು, ರಾಜೇಂದ್ರ ಪ್ರಸಾದ್, ಶಿವರಾಜ್ ಕೆ.ಆರ್. ಪೇಟೆ, ಅಜಯ್, ನರೇಶ್ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here