ಅನರ್ಹರ ವಿಚಾರಣೆಯಿಂದ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದೇಕೆ ಗೊತ್ತಾ..?!

0
859

ಅಚ್ಚರಿಯ ಬೆಳವಣೆಗೆಯೊಂದರಲ್ಲಿ ಕಾಂಗ್ರೆಸ್—ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರ ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ನ್ಯಾಯಮೂರ್ತಿ ಒರ್ವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಇಂದು ನಡೆಯಬೇಕಿದ್ದ ವಿಚಾರಣೆ ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ. ಹೌದು, ನ್ಯಾ. ಮೋಹನ್ ಶಾಂತನಗೌಡ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.

ನ್ಯಾ. ಎನ್.ವಿ ರಮಣ, ನ್ಯಾ.ಮೋಹನ್ ಶಾಂತನಗೌಡ ಮತ್ತು ನ್ಯಾ.ಅಜಯ್ ರಸ್ತೋಗಿ ಅವರಿರುವ ತ್ರಿಸದಸ್ಯ ಪೀಠ ಈ ಅನರ್ಹ ಶಾಸಕ ಸಲ್ಲಿಸಿರುವ ಒಟ್ಟು 9 ರಿಟ್ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ದಿಢೀರ್ ಬೆಳವಣೆಗೆಯಲ್ಲಿ ನ್ಯಾ. ಮೋಹನ್ ಶಾಂತನಗೌಡ ಅವರು ತ್ರಿ ಸದಸ್ಯ ಪೀಠದಿಂದ ಹೊರ ಬಂದಿದ್ದಾರೆ. ತಮ್ಮ ಈ ನಡೆಗೆ ಯಾವುದೇ ನಿಖರ ಕಾರಣವನ್ನು ನ್ಯಾ. ಮೋಹನ್ ಶಾಂತನಗೌಡ ಅವರು ತಿಳಿಸಿಲ್ಲ.

ಇನ್ನು ಮೈತ್ರಿ ಸರ್ಕಾರದ ಅವಧಿಯಲ್ಲಿ ಸ್ಪೀಕರ್ ರಮೇಶ್‍ಕುಮಾರ್ ಅವರು ನಮ್ಮ ಸದಸ್ಯತ್ವವನ್ನು ರದ್ದುಪಡಿಸಿರುವುದು ಸಂಪೂರ್ಣ ಕಾನೂನು ಬಾಹಿರ, ಪಕ್ಷ ವಿರೋಧಿ ನಡೆಗಾಗಿ ಸದಸ್ಯತ್ವವನ್ನು ರದ್ದು ಪಡಿಸುವ ಸಂವಿಧಾನದ 10ನೇ ಪರಿಚ್ಛೇದವನ್ನು ಅನಾವಶ್ಯಕವಾಗಿ ಸ್ಪೀಕರ್ ಈ ಪ್ರಕರಣದಲ್ಲಿ ಎಳೆದು ತಂದಿದ್ದಾರೆ. ಸ್ಪೀಕರ್ ಕಚೇರಿಗೆ ರಾಜೀನಾಮೆ ಸಲ್ಲಿಸಿದ ಸಂದರ್ಭದಲ್ಲಿ ನಮ್ಮ ಮೇಲೆ ಯಾವುದೇ ಅನರ್ಹತೆಯ ದೂರಿರಲಿಲ್ಲ ಎಂದು ಅತೃಪ್ತ ಶಾಸಕರು ಅನರ್ಹತೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.

LEAVE A REPLY

Please enter your comment!
Please enter your name here