ಡಿ.ಕೆ.ಶಿವಕುಮಾರ್ ಅರ್ಜಿ ವಜಾ, ಡಿಕೆಶಿ ಬಂಧನ…!?

0
324

ಇಡಿ ವಿಚಾರಣೆಯಲ್ಲಿ ಮಧ್ಯಂತರ ರಕ್ಷಣೆ ಕೋರಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಬೇಕಾದರು ಡಿ.ಕೆ.ಶಿವಕುಮಾರ್ ಅವರನ್ನು ಇಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಇನ್ನು ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ಅರವಿಂದ್ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿದೆ‌.

ಇನ್ನು ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸೋ ಅವಕಾಶ ಡಿ.ಕೆ. ಶಿವಕುಮಾರ್‌ಗೆ ಮುಂದಿದೆ. ಆದರೆ ಇಂದು ಅರ್ಜಿ ಸಲ್ಲಿಸಿದರು ಇಂದೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಗಳಿಲ್ಲ. ಹೀಗಾಗಿ ಡಿಕೆಶಿಗೆ ಬಂಧನ ಭೀತಿ ಶುರುವಾಗಿದೆ.

ಹೀಗಾಗಿಯೇ ಡಿ.ಕೆ. ಶಿವಕುಮಾರ್‌ ದೆಹಲಿಯತ್ತ ತೆರಳಿದ್ದಾರೆ. ಅರ್ಜಿ ತಿರಸ್ಕಾರ ಆದ ಹಿನ್ನಲೆ ಇಂದೇ ಇಡಿ ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ. ವಿಚಾರಣೆಗೆ ಹಾಜರಾದ ಸಂದರ್ಭದಲ್ಲೇ ಇಡಿ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆಯೋ ಸಾಧ್ಯತೆ ಇದೆ. ಸದ್ಯ ಡಿ.ಕೆ. ಶಿವಕುಮಾರ್‌ಗೆ ಯಾವುದೇ ರೀತಿಯ ಕಾನೂನಾತ್ಮಕ ರಕ್ಷಣೆಯಿಲ್ಲ.

ಇನ್ನು ಒಂದು ವೇಳೆ ಇವತ್ತೇ ಬಂಧನಕ್ಕೊಳಗಾದರೆ ಸತತವಾಗಿ ಮೂರು ದಿನ ಸರ್ಕಾರಿ ರಜೆ ಇರುವುದರಿಂದ ಮೂರು ದಿನ ಬೇಲ್‌ ಸಿಗೋ ಸಾಧ್ಯತೆಯೂ ಕಡಿಮೆ. ಇನ್ನು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕೂಡಾ ಕಾಲಾವಕಾಶವಿಲ್ಲ. ಹೀಗಾಗಿ ಬಂಧನಕ್ಕೊಳಗಾದ್ರೆ ಬೇಲ್‌ ಪಡೆಯೋದು ಡಿ.ಕೆ.ಶಿವಕುಮಾರ್‌ಗೆ ತೀವ್ರ ಕಷ್ಟವಾಗಲಿದೆ.

LEAVE A REPLY

Please enter your comment!
Please enter your name here