ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹೊರ ರಾಜ್ಯದ ಯುವತಿಯನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಮೈಸೂರಿನ ಕುವೆಂಪುನಗರದ ನಿವಾಸಿ ಸುಗುಣ, ಹೂಟಗಳ್ಳಿ ಕೆ.ಹೆಚ್.ಬಿ. ಕಾಲೋನಿಯ ಗುರು ಮತ್ತು ಆತನ ಪತ್ನಿ ಸುಮಾ ಹಾಗೂ ಪ್ರಕಾಶ್ ಬಂಧಿತರೆಂದು ಹೇಳಲಾಗಿದೆ.
ಗುರು -ಸುಮಾ ದಂಪತಿ ತಮ್ಮ ಮನೆಯಲ್ಲಿ ಕೋಲ್ಕತಾ ಮೂಲದ ಯುವತಿಯನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದು, ಅವರಿಗೆ ಸುಗುಣ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮನೆಗೆ ಗಿರಾಕಿಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೈಸೂರು ನಗರ ಡಿಸಿಪಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಕೋಲ್ಕತ್ತ ಮೂಲದ ಯುವತಿಯನ್ನು ರಕ್ಷಿಸಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.