ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಸಚಿವ, ವಿಧಾನ ಪರಿಷತ್ ಸದಸ್ಯರ ಬೆದರಿಕೆ ಕಾರಣ..! : ಡಿಕೆ ಶಿವಕುಮಾರ್

0
40

ಕಾರವಾರ: ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ ನನಗೆ ಗೊತ್ತಿದೆ. ಅವರ ಯಾವುದೋ ಒಂದು ವಿಡಿಯೋವನ್ನು ಬಳಸಿ ಒಬ್ಬ ಸಚಿವ ಹಾಗೂ ಎಂಎಲ್ ಸಿ ಬೆದರಿಕೆ ಹಾಕುತ್ತಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅವರು, ಆ ವಿಡಿಯೋವನ್ನು ದೆಹಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಅಂತಾ ತಿಳಿದುಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬುದು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗವಾಗಲಿ.’ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಗಂಭೀರವಾದ ವಿಚಾರ. ಸಂತೋಷ ಅವರನ್ನು ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂಬ ಸುದ್ದಿ ಎರಡು ತಿಂಗಳಿಂದ ಹರಿದಾಡಿತ್ತು. ಇದರಲ್ಲಿ ಸಾಕಷ್ಟು ಗೌಪ್ಯ ಅಡಗಿವೆ. ಈ ಪ್ರಕರಣವನ್ನು ಸರ್ಕಾರ ತನಿಖೆ ನಡೆಸುವುದರಲ್ಲಿ ಅರ್ಥವಿಲ್ಲ. ಉನ್ನತ ಮಟ್ಟದ ತನಿಖೆ ಅಗತ್ಯವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣ ಸರ್ಕಾರ ತನಿಖೆ ಅರ್ಥವಿಲ್ಲ. ಇದರಲ್ಲಿ ಸಾಕಷ್ಟು ಗೌಪ್ಯ ವಿಚಾರಗಳು ಅಡಗಿರುತ್ತವೆ. ಸಂತೋಷ್ ಅವರಿಗೆ ಬೆದರಿಸಿರಬಹುದು. ಸಿಎಂ ಅವರನ್ನು ಬೆದರಿಸಿರುವ ಸಾಧ್ಯತೆಗಳು ಇವೆ. ಆ ಎಂಎಲ್ ಸಿ ಹಾಗೂ ಸಚಿವರು ಇಬ್ಬರು ಬೆದರಿಸುತ್ತಿದ್ದರು ಎಂಬ ಮಾಹಿತಿ ಇತ್ತು. ಹೀಗಾಗಿ ಇದರಲ್ಲಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ.

“ಕಟೀಲ್ ಅವರನ್ನು ಆಸ್ಪತ್ರೆಗೆ ಸೇರಿಸುವ ಅನಿವಾರ್ಯತೆ ಇದೆ”

ಸಿದ್ದರಾಮಯ್ಯ ಅವರು ಮಾದಕ ದ್ರವ್ಯ ಹಣದಿಂದ ಸರ್ಕಾರ ನಡೆಸುತ್ತಿದ್ದಾರೆ, ಇದುವರೆಗೂ ಯಾಕೆ ಎಫ್ ಐಆರ್ ದಾಖಲಿಸಿಲ್ಲ? ಎಂದು ನಳಿನ್ ಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು, ನಳಿಗೆ ಹೆಚ್ಚುಕಮ್ಮಿ ಆಗಿರಬೇಕು. ಅವರನ್ನು ಆಸ್ಪತ್ರೆಗೆ ಸೇರಿಸುವ ಅನಿವಾರ್ಯತೆ ಇದೆ.
ಡ್ರಗ್ಸ್ ಪ್ರಕರಣದಲ್ಲಿ ನಟಿಯರನ್ನು ಜೈಲಿಗೆ ಹಾಕಿದ್ದಾರೆ. ನಾನು ಸಿದ್ದರಾಮಯ್ಯ ಅವರ ಸರ್ಕಾರದ ಭಾಗವಾಗಿದ್ದೆ, ನಮ್ಮ ಮೇಲೆ ಯಾಕೆ ಎಫ್ಐಆರ್ ಹಾಕಿಲ್ಲ? ಜವಾಬ್ದಾರಿಯುತ ಸ್ಥಾನದಲ್ಲಿ ಕೂತಿರುವ ಕಟೀಲ್ ಆ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ. ಅವರಿಗೆ ಅಲ್ಪಸ್ವಲ್ಪ ರಾಜಕೀಯ ಜ್ಞಾನ ಇದೆ ಎಂದುಕೊಂಡಿದ್ದೆ. ಒಂದು ಸರ್ಕಾರವನ್ನು ಡ್ರಗ್ಸ್ ಹಣದಿಂದ ನಡೆಸಲಾಗುತ್ತದೆ ಎಂಬ ಹೇಳಿಕೆ ಅವರ ಸ್ಥಾನಕ್ಕೆ ಕಳಂಕ ತರುವಂತಿದೆ ಎಂದು ವಾಗ್ದಾಳಿ ನಡೆಸಿದರು.

ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಉಪ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ನಾನು ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೊದಲು ನಮ್ಮ ಮನೆ ಸರಿ ಮಾಡಿಕೊಳ್ಳುತ್ತಿದ್ದು, ಮಿಕ್ಕಿದ್ದು ಆಮೇಲೆ. ನಾವು ವಿರೋಧ ಪಕ್ಷದವರು. ನಮಗೂ ಬಿಜೆಪಿ ಆಂತರಿಕ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರು ಸರ್ಕಾರದಲ್ಲಿ ಯಾರನ್ನಾದರೂ ಸೇರಿಸಿಕೊಳ್ಳಲಿ ಅಥವಾ ತೆಗೆದುಹಾಕಲಿ ಅದಕ್ಕೂ ನಮಗೂ ಸಂಬಂಧ ಇಲ್ಲ. ಆದರೆ ಒಂದಂತೂ ನಿಜ. ನಮ್ಮ ಪಕ್ಷದಿಂದ ಕೆಲವರು ಅಲ್ಲಿಗೆ ಹೋಗಿದ್ದಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸುತ್ತಾರೆ.
ನಾನು ಎಲ್ಲ ತನಿಖೆಗೂ ಸಹಕರಿಸುತ್ತೇನೆ. ನಾನು ತಪ್ಪು ಮಾಡಿಲ್ಲವಾದರೆ, ಯಾಕೆ ಹೆದರಬೇಕು? ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here