ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ: ಬಿ.ಎಸ್. ಯಡಿಯೂರಪ್ಪ

0
116

ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ನಾಳೆ ಸಂಜೆ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಸಿಎಂ ನವ ನಿರ್ಮಾಣ ಯೋಜನೆ ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ,

ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು. ಕೆಲವೊಂದು ಕಡೆ ಅನಗತ್ಯವಾಗಿ ಹಣ ವೆಚ್ಚ ಮಾಡಲಾಗುತ್ತಿತ್ತು. ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ತಕ್ಷಣಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲವೆಂದು ಸಿಎಂ ಯಡಿಯೂರಪ್ಪ ಹೇಳಿರುವುದು ಆಕಾಂಕ್ಷಿಗಳಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here