ಅನರ್ಹ ಶಾಸಕ ವಿಶ್ವನಾಥ್ ಗೆ ಹಿಡಿ ಶಾಪ ಹಾಕಿದ ಪ್ರವಾಹ ಸಂತ್ರಸ್ತರು…!

0
100

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯ ಆರ್ಭಟಕ್ಕೆ ಜನಜೀವನ ತತ್ತರಿಸಿದೆ. ಇತ್ತ ಅತೃಪ್ತರಾಗಿ ರಾಜೀನಾಮೆ ನೀಡಿ ಅನರ್ಹರಾದ ಜನಪ್ರತಿನಿಧಿಗಳ ಕ್ಷೇತ್ರದ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ಹೌದು, ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಅಡಗೂರು ವಿಶ್ವನಾಥ್ ವಿರುದ್ಧ ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ” ವೋಟು ಹಾಕಿ ಗೆಲ್ಲಿಸಿದರೆ, ನಮ್ಮ ನೆರವಿಗೆ ಬರುತ್ತಿಲ್ಲ. ರೆಸಾರ್ಟ್ ರಾಜಕೀಯದಲ್ಲಿ ಇದ್ದ ಆಸಕ್ತಿ ಈಗ ಕಾಣುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನು ಕೆಲವು ಜನರು ಮುಳುಗಿದ ಮನೆಯ ಆವರಣದಲ್ಲಿ ‌ನಿಂತು ವಿಶ್ವನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಇನ್ನು ಪ್ರವಾಹ‌ ಪರಿಸ್ಥಿತಿ ಉತ್ತರ ಕರ್ನಾಟಕದಲ್ಲಿ ಮಾತ್ರವಲ್ಲದೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿಯೂ ತಲೆದೋರಿದೆ. ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಹುಣಸೂರಿನ ಬಿಲ್ಲೇನಹಳ್ಳಿ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. ಇಲ್ಲಿನ 10ಕ್ಕೂ ಹೆಚ್ಚು ಮನೆಗಳು ಕುಸಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಆದರು ಅನರ್ಹ ಶಾಸಕ ಎಚ್. ವಿಶ್ವನಾಥ್ ಮಾತ್ರ ಇತ್ತ ತಲೆ ಹಾಕಿಲ್ಲ. ಹೀಗಾಗಿ ಇಲ್ಲಿಯ ಜನ ಶಾಸಕರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ‌.

LEAVE A REPLY

Please enter your comment!
Please enter your name here