ಕೇಂದ್ರದ ಮಾಜಿ ಸಚಿವ ಅರುಣ್​ ಜೇಟ್ಲಿ ನಿಧನ

0
254

ಕೇಂದ್ರ ಮಾಜಿ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ವಿಧಿವಶರಾಗಿದ್ದಾರೆ.

ಅರುಣ್ ಜೇಟ್ಲಿ ಅವರು ಅನಾರೋಗ್ಯದ ಕಾರಣ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಅರುಣ್ ಜೇಟ್ಲಿ ಅವರು ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾಗೆ ತೆರಳಿ ಕ್ಯಾನ್ಸರ್ ಚಿಕಿತ್ಸೆ ಪಡೆದುಕೊಂಡಿದ್ದರು. 2014ರ ಮೋದಿ ಸರ್ಕಾರದ ಸಂಪುಟದಲ್ಲಿ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸಿದ ಅರುಣ್ ಜೇಟ್ಲಿ 2018 ರ ಮೇ ತಿಂಗಳಲ್ಲಿ ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ಅರುಣ್ ಜೇಟ್ಲಿ ಅವರು ಹಳೆ ಹುರುಪಿನಲ್ಲಿಯೇ ಸಚಿವರಾಗಿ ಕೆಲಸ ನಿರ್ವಹಿಸಿದರು. ಆದರೆ ಅಂದಿನಿಂದ ಅರುಣ್ ಜೇಟ್ಲಿ ಅವರ ಆರೋಗ್ಯ ಕ್ಷೀಣಿಸುತ್ತಾ ಬಂದಿತ್ತು .

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಮೇ 23 ರಂದು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಆಗಸ್ಟ್ 9 ರಂದು ಬೆಳಗ್ಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . 66 ವಯಸ್ಸಿನ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್ ಹೃದಯರೋಗ ತಜ್ಞರು ತಪಾಸಣೆ ಮಾಡಿದರು.

ಅರುಣ್ ಜೇಟ್ಲಿ ಅವರು ಆಸ್ಪತ್ರೆ ಸೇರಿದ ವಿಷಯ ತಿಳಿಯುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವರಾದ ಹರ್ಷವರ್ಧನ್ ಗೃಹ ಸಚಿವರಾದ ಅಮಿತ್ ಶಾ ಹಾಗೂ ಅನೇಕ ಮುಖಂಡರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು .ಇದೇ ತಿಂಗಳ 19ರ ರಾತ್ರಿ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದರು.

ಡಿಸೆಂಬರ್ 28, 1952ರಲ್ಲಿ ದೆಹಲಿಯಲ್ಲಿ ಜನಸಿದ್ದ ಜೇಟ್ಲಿ, ಸೇಂಟ್ ಕ್ಸೇವಿಯರ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ನಂತರ 1977ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು.

LEAVE A REPLY

Please enter your comment!
Please enter your name here