ನೆರೆ ಪರಿಸ್ಥಿತಿ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ ಅಂದ್ರೆ ಹೇಳಿ ನಾವು ಜೊತೆ ದೆಹಲಿಗೆ ಬರುತ್ತೇವೆ: ಎಚ್.ಡಿ. ಕುಮಾರಸ್ವಾಮಿ

0
236

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ಕೋರಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನವರನ್ನು ಸರ್ವಪಕ್ಷ ನಿಯೋಗ ಕೊಂಡೊಯ್ಯುವಂತೆ ಟ್ವಿಟರ್‍ನಲ್ಲಿ ಆಗ್ರಹಿಸಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಅವರನ್ನು ಉದ್ದೇಶಿಸಿ, ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಿ ಜೊತೆ ರಾಜ್ಯದ ನೆರೆ ಪರಿಸ್ಥಿತಿ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯವಿಲ್ಲ ಎಂದಾದರೆ ನಾವು ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವ ಪಕ್ಷದ ನಿಯೋಗದ ಜೊತೆ ಪ್ರಧಾನಿಯನ್ನು ಭೇಟಿ ಮಾಡೋಣ ಎಂದಿದ್ದಾರೆ.

ರಾಜ್ಯದಲ್ಲಿರುವುದು ತೊಘಲಕ್ ಸರ್ಕಾರ ಮಾತ್ರ ಎಂದುಕೊಂಡಿದ್ದೆ. ಆದರೆ ಈ ಸರ್ಕಾರಕ್ಕೆ ಕಣ್ಣು, ಕಿವಿ ಯಾವುದು ಇಲ್ಲ. ನೆರೆ ಬಂದು ಒಂದೂವರೆ ತಿಂಗಳಾದರೂ ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಒದಗಿಸಲು ಸಾಧ್ಯವಾಗಿಲ್ಲ ಎಂದು ಅವರು ಟೀಕಿಸಿದ್ದಾರೆ

LEAVE A REPLY

Please enter your comment!
Please enter your name here