ಬಾರದ ಲೋಕಕ್ಕೆ ತೆರಳಿದ ಹೆಚ್.ಜಿ. ಸೋಮಶೇಖರ ರಾವ್

0
78

ಬೆಂಗಳೂರು: ಅಭಿನಯದ ಮೂಲಕವೇ ಕಲಾ ಬಳಗವನ್ನು ಸಂಪಾಧಿಸಿದ್ದ ಹೆಚ್.ಜಿ. ಸೋಮಶೇಖರ ರಾವ್ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೆಚ್ ಜಿ ಸೋಮಶೇಖರ್ ( 86) ಇಂದು ಮದ್ಯಾಹ್ನ 12.30 ಕ್ಕೆ ನಿಧನರಾಗಿದ್ದು, ಇನ್ನು ಮೃತ ದೇಹವನ್ನು ಶ್ರೀನಗರ ಬಸ್ ಸ್ಟಾಪ್ ಹತ್ತಿರದ ಶ್ರೀಯುತರ ಮನೆಗೆ ತರಲಾಗುತ್ತದೆ.

ಹೆಚ್.ಜಿ. ಸೋಮಶೇಖರ ರಾವ್ ೧೯೮೧ರಲ್ಲಿ ಚಿತ್ರರಂಗವನ್ನು ಪ್ರವೇಶಿಸಿದರು. ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಸಿನಿಮಾದಲ್ಲಿ ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು. ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವೀಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ಅಭಿನಯಕ್ಕೆ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.

ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ ಕೀರ್ತಿ ಇವರದು..

ಕೆನರಾ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ಹೆಚ್.ಜಿ. ಸೋಮಶೇಖರ ರಾವ್ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು. ಸೋಮಶೇಖರರಾಯರ ಬದುಕಿನ ಅನುಭವ ಕಥನವು ಪ್ರಕಟವಾಗಿದೆ. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಹೆಚ್.ಜಿ. ಸೋಮಶೇಖರ ರಾವ್ ಪ್ರೀತಿಸಿದ್ದರು.

LEAVE A REPLY

Please enter your comment!
Please enter your name here