ಚುನಾವಣೆಗೂ ಮುನ್ನ ಸೋಲೊಪ್ಪಿಕೊಂಡ್ರಾ ಕುಮಾರಸ್ವಾಮಿ..?

0
56

ಬೆಂಗಳೂರು: ಆರ್ ಆರ್ ನಗರದಲ್ಲಿ ನಾವು ಹೆಚ್ಚು ಖರ್ಚು ಮಾಡುವ ಶಕ್ತಿ ಇರಲಿಲ್ಲ. ಆದ್ರೆ ಶಿರಾದಲ್ಲಿ ನಾವು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಆರ್ ಆರ್ ನಗರ ಮತ್ತು ಶಿರಾ ಉಪ ಚುನಾವಣೆ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮತದಾನದ ನಂತರ ಎರಡು ಪಕ್ಷದವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದೇವೆ ಅಂತಾರೆ. ಹಣದ ಮುಖಾಂತರ ಚುನಾವಣೆ ನಡೆಸಿದ್ದಾರೆ. ಎರಡು ಪಕ್ಷ ಗಳು ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಆರ್ ಆರ್ ನಗರದಲ್ಲಿ ನಾವು ಹೆಚ್ಚು ಖರ್ಚು ಮಾಡುವ ಶಕ್ತಿ ಇರಲಿಲ್ಲ. ಶಿರಾದಲ್ಲಿ ನಾವು ಗೆಲ್ಲುತ್ತೇವೆ ಎಂದರು.

ಚುನಾವಣೆ ಬಳಿಕ ಜೆಡಿಎಸ್ ನಲ್ಲೂ ಅಧಿಕಾರ ಬದಲಾವಣೆ
ಬಿಜೆಪಿ ಹಾಗೂ ಕಾಂಗ್ರೆಸ್ ನವರು ಚುನಾವಣಾ ಆಯೋಗ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ನಾವು ನಿಗದಿಯಾದಷ್ಟೇ ಖರ್ಚು ಮಾಡಿದ್ದೇವೆ. ಪ್ರಾದೇಶಿಕ ಪಕ್ಷವಾಗಿ ಮನೆಮನೆಗೆ ಹೋಗಿ ಕಾರ್ಯಕರ್ತರ ಮನ ಒಲಿಸಿದ್ದೇವೆ. ಫಲಿತಾಂಶ ಬಂದ ಬಳಿಕ ಸಿಎಂ ಬದಲಾಗ್ತಾರೆ ಅಂತ ಸಿದ್ದರಾಮಯ್ಯ ಹೇಳ್ತಾರೆ. ವಿಪಕ್ಷ ನಾಯಕರೇ ಬದಲಾಗ್ತಾರೆ ಅಂತಾ ಸಿಎಂ ಹೇಳ್ತಾರೆ. ಇಬ್ಬರೂ ಪರಸ್ಪರ ಒಬ್ಬರನ್ನೊಬ್ಬರು ದೂರುತ್ತಿದ್ದಾರೆ. ಫಲಿತಾಂಶ ಬಂದ ಬಳಿಕ ಜೆಡಿಎಸ್ ನಲ್ಲಿ ಏನೂ ಬದಲಾವಣೆ ಆಗಲ್ಲ. ನಮ್ಮ ಬಳಿ ಅಂತಹ ಪ್ರಭಾವಿ ಸ್ಥಾನಗಳೇನೂ ಇಲ್ಲ. ಆದರೆ ಸಂಘಟನೆಯ ದೃಷ್ಟಿಯಿಂದ ಹಲವು ಪದಾಧಿಕಾರಿಗಳ ನೇಮಕ ಅಥವಾ ಬದಲಾವಣೆ ಮಾಡ್ತೀವಿ ಎಂದು ಹೇಳುವ ಮೂಲಕ ಜೆಡಿಎಸ್ ನಲ್ಲೂ ಸಣ್ಣಪುಟ್ಟ ಬದಲಾವಣೆಗಳಿವೆ ಎಂಬ ಸೂಚನೆ ಕೊಟ್ಟರು.

ವಿದ್ಯುತ್  ದರ ಏರಿಕೆ 1 ವರ್ಷದವರೆಗೆ ಮುಂದೂಡಿ

ಬೆಂಗಳೂರು: ಪ್ರತಿ ಯೂನಿಟ್ ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದಿಂದ ವಿದ್ಯುತ್ ದರ ಏರಿಕೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು. ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು. ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

ವಿನಯ್ ಕುಲಕರ್ಣಿ ಬಂಧನದ ವಿಚಾರ ಕುರಿತು ಮಾತನಾಡಿದ ಅವರು, ಎರಡು ಪಕ್ಷದವರು ವಿನಯ್ ಕುಲಕರ್ಣಿ ವಿಚಾರ ರಾಜಕೀಯ ಲಾಭ ಪಡೆಯುತ್ತಾ ಇದ್ದಾರೆ. ಈ ಹಗರಣದ ಬಗ್ಗೆ ಹಲವಾರು ರೀತಿ ಗುಮಾನಿ ಇತ್ತು. ಯೋಗಿಶ್ ಗೌಡ ನಿಧನದ ಸತ್ಯಾಸತ್ಯತೆ ಏನಿದೆ..? ಯಾವುದೇ ರಾಜಕೀಯಕ್ಕೆ ಒಳಗಾಗದೇ ಯೋಗಿಶ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ವಿನಯ್ ಕುಲಕರ್ಣಿ ಬಿಜೆಪಿಗೆ ಸೇರಲು ಹೊರಟಿದ್ರಾ ನನಗೆ ಗೊತ್ತಿಲ್ಲ. ರಾಜಕೀಯ ಪ್ರೇರಿತ ಅಂತ ರಾಜಕಾರಣಿಗಳು ಹೇಳೋದು ಸಾಮಾನ್ಯ. ಆದ್ರೆ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆ ನಡೆಸಬೇಕು ಎಂದರು.

LEAVE A REPLY

Please enter your comment!
Please enter your name here