ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ. ಗುರುವಾರದಂದು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಲಿದ್ದು, ಕರಾವಳಿಯಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಪ್ರಾದೇಶಿಕ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಈಗಿರುವ ವಾತಾವರಣದ ಪ್ರಕಾರ, ಪೂರ್ವದ ಅಲೆಗಳಿಂದಾದ ಟ್ರಫ್, ಮಾಲ್ಡೀವ್ಸ್ ದ್ವೀಪದಿಂದ ಆಗ್ನೇಯ ಭಾಗದ ಅರಬ್ಬೀ ಸಮುದ್ರದವರೆಗೆ ವಿಸ್ತರಿಸಿದ್ದು, ಈ ಟ್ರಫ್ ಪಶ್ಚಿಮ ದಿಕ್ಕಿಗೆ ಚಲಿಸುವ ಸಾಧ್ಯತೆ ಇದ್ದು, ಆಗ್ನೇಯ ಭಾಗದ ಅರಬ್ಬೀ ಸಮುದ್ರದಲ್ಲಿ ನ.೧೯ ರಂದು ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ. ಇದು ಡೀಪ್ ಡಿಪ್ರೆಷನ್ ಆಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ನ.೧೭ ರಿಂದ ನ.೧೯ ರವರೆಗೆ ಹಗುರವಾಗಿ ಮಳೆಯಾಗಲಿದ್ದು, ನ.೨೦ ರಂದು ಅಲ್ಲಲ್ಲಿ ಮಳೆಯಾಗಲಿದೆ ಎಂದರು.
ಉತ್ತರ ಒಳನಾಡಿನಲ್ಲಿ ನ.೧೭ ರಿಂದ ನ.೨೦ ರವರೆಗೆ ಹಗುರ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ನ.೧೭ ಹಾಗೂ ೧೮ ರಂದು ಮಳೆಯಾಗಲಿದ್ದು, ನ.೨೧ ರ ಬಳಿಕ ರಾಜ್ಯಾದ್ಯಂತ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ನ.೧೭ ಹಾಗೂ ನ.೧೮ ರಂದು ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದಿದ್ದಾರೆ.
ಇಂದು ರಾಜ್ಯದ ಕರಾವಳಿ ಹಾಗೂ ದ.ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಚಾಮರಾಜನಗರ ಜಿಲ್ಲೆಯಲ್ಲಿ 4 ಸೆ.ಮೀ, ಆನೇಕಲ್ ನಲ್ಲಿ 4 ಸೆಂ.ಮೀ, ಎಲೆಕ್ಟ್ರಾನಿಕ್ ಸಿಟಿಯಲ್ಲಿ 3 ಸೆಂ.ಮೀ, ಎಮ್ ಎಮ್ ಹಿಲ್ಸ್ ನಲ್ಲಿ 3 ಸೆಂ.ಮೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉಡುಪಿ, ಉ.ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ, ಮೈಸೂರು, ತುಮಕೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಚದುರಿದ ಹಾಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.
ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.
ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ
BUY NOW