ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಶುಭ ಸುದ್ದಿ

0
113

ಸಾಕಷ್ಟು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಶಿಕ್ಷಕರ ವರ್ಗಾವಣೆಗೆ ಇದೀಗ ಮತ್ತೆ ಚಾಲನೆ ದೊರೆತಿದೆ. ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಮುಂದುವರೆಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಹಿಂದೆ ಜುಲೈ 30 ಮತ್ತು 31 ರಂದು ನಡೆಯಬೇಕಿದ್ದ ಕೌನ್ಸಲಿಂಗ್ ಅನ್ನು ಶಿಕ್ಷಣ ಇಲಾಖೆ ಮುಂದೂಡಿತ್ತು. ಇದೀಗ ಮತ್ತೆ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿರುವುದು ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ನೆಮ್ಮದಿ ನಿಟ್ಟುಸಿರು ಬಿಡುವಂತಾಗಿದೆ.

ಆಗಸ್ಟ್ 1 ರಿಂದ 8 ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದವರಿಗೆ ಘಟಕದೊಳಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದ್ದು, ಆಗಸ್ಟ್ 8 ರಿಂದ 9 ರವರೆಗೆ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು, ಹಿರಿಯ ಮುಖ್ಯಶಿಕ್ಷಕರು, ವಿಶೇಷ ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ.

LEAVE A REPLY

Please enter your comment!
Please enter your name here