ಭಾರತದ ಬ್ಯಾಂಕಿಂಗ್ ವ್ಯವಸ್ಥೆಗೆ ಐತಿಹಾಸಿಕ ಘೋಷಣೆ…!

0
327

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಭಾರತದ ಬ್ಯಾಂಕಿಂಗ್ ವ್ಯವಸ್ಥೆಗೆ ಮೇಜರ್ ಸರ್ಜರಿ ಮಾಡಿದೆ. ಕುಸಿಯುತ್ತಿರುವ ದೇಶದ ಆರ್ಥಿಕತೆಗೆ ಬಲ ನೀಡುವ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಕೆಲವು ಬ್ಯಾಂಕುಗಳ ವಿಲೀನಕ್ಕೆ ಮುಂದಾಗಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್ ಗಳ ವಿಲೀನವನ್ನು ಘೋಷಣೆ ಮಾಡಿದ್ದು, ಸರಕಾರಿ ಸ್ವಾಮ್ಯದ ಅನೇಕ ಬ್ಯಾಂಕ್ ಗಳು ವಿಲೀನಗೊಳ್ಳಲಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನಗೊಳ್ಳಲಿವೆ.

ಇನ್ನು ಅದೇ ರೀತಿ ಮೂರು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ವಿಲೀನದ ಯೋಜನೆಗಳನ್ನು ಸಹ ಘೋಷಣೆ ಮಾಡಲಾಗಿದೆ.

ಹೌದು, ಕೆನರಾ ಬ್ಯಾಂಕ್ ಹಾಗೂ ಸಿಂಡಿಕೇಟ್ ಬ್ಯಾಂಕ್, ಅದೇ ರೀತಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್, ಇನ್ನು ಇಂಡಿಯನ್ ಬ್ಯಾಂಕ್ ಅನ್ನು ಅಲಹಾಬಾದ್ ಬ್ಯಾಂಕ್ ಜತೆಗೆ ವಿಲೀನ ಮಾಡುವ ಪ್ರಸ್ತಾವ ಇದೆ ಎನ್ನಲಾಗಿದೆ. ಬ್ಯಾಂಕುಗಳ ವಿಲೀನಗಳ ಮೂಲಕ ಆರ್ಥಿಕತೆಗೆ ಶಕ್ತಿ ನೀಡುವ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಇನ್ನು ರಾಷ್ಟ್ರೀಯ ಬ್ಯಾಂಕ್ ಗಳ ಮಂಡಳಿಯ ಸಮಿತಿ ಜನರಲ್ ಮ್ಯಾನೇಜರ್ ಗಳು ಮತ್ತು ಅದಕ್ಕಿಂತ ಮೇಲಿನ ಹಂತದ ಅಧಿಕಾರಿಗಳ ಮೌಲ್ಯಮಾಪನವನ್ನು ಆ ಸಮಿತಿಯಿಂದ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here