‘ನಾನು ದೇವೇಗೌಡರ ಬಳಿ ಕ್ಷಮೆ ಕೇಳುತ್ತೇನೆ’ ಎಚ್. ವಿಶ್ವನಾಥ್ ಅಳಲು

0
119

ನಾನು ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕ್ಷಮೆ ಕೇಳುತ್ತೇನೆ. ಸನ್ನಿವೇಶದ ಒತ್ತಡ, ನನಗೆ ಆದ ಅವಮಾನ, ನನ್ನ ನಿರ್ಲಕ್ಷಿಸಿದ ರೀತಿಯಿಂದ ನಾನು ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಈ ನಿರ್ಧಾರದಿಂದ ದೇವೇಗೌಡರಿಗೆ ನೋವಾಗಿದ್ದರೆ, ನಾನು ಅವರಿಗೆ ಕ್ಷಮೆ ಕೇಳುತ್ತೇನೆ ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್. ವಿಶ್ವನಾಥ್, ಮೈತ್ರಿ ಸರ್ಕಾರ ಪತನಕ್ಕೆ ಸರ್ಕಾರ ನಡೆಸಿದವರೇ ಕಾರಣ. ದೋಸ್ತಿ ಸರ್ಕಾರದ ಪತನಕ್ಕೆ ನಾವು 20 ಶಾಸಕರಾಗಲಿ, ಬಿಜೆಪಿ ಆಗಲಿ ಕಾರಣವಲ್ಲ. ಸರ್ಕಾರ ನಡೆಸುವವರು ನಾಯಕರ ಥರ ಇರಲಿಲ್ಲ, ಮಾಲೀಕರ ರೀತಿ ಇದ್ದರು. ಹೀಗಾಗಿ ಸರ್ಕಾರ ಪತನವಾಯಿತು ಎಂದರು.

ಇನ್ನು ನಾವು ಅತೃಪ್ತರಲ್ಲ. ನಾವು ತೃಪ್ತರು. ದೋಸ್ತಿ ಸರ್ಕಾರ ನಡೆಸಿದವರು ಅತೃಪ್ತರಾಗಿದ್ದಾರೆ. ದೋಸ್ತಿಗಳ ನಡುವಿನ ಅತೃಪ್ತಿ, ಅಸಮಾಧಾನ, ಅನುಮಾನ ಇದರಿಂದ ಸರ್ಕಾರ ಉರುಳಿತು. ಸಾರಾ ಮಹೇಶ್ ಎಂಬ ಅಪ್ರಬುದ್ಧ ಬಾಯಿಗೆ ಬಂದಂತೆ ಹೇಳುತ್ತಾನೆ. ನಾನು ಸತ್ಯವಂತ, ಸಂತ, ಮಹಾತ್ಮಗಾಂಧಿ ಎಂದೆಲ್ಲ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳುತ್ತಿದ್ದರು. ಆದರೆ, ಅವರು ಮಾಡಿದ್ದೇನು..? ಎಂದು ವಾಗ್ದಾಳಿ ನಡೆಸಿದರು.

LEAVE A REPLY

Please enter your comment!
Please enter your name here