ಈ ಹಿಂದೆ ಸಮ್ಮಿಶ್ರ ಸರ್ಕಾರ ಎದುರಿಸಿದ ಪರಿಸ್ಥಿತಿಯೇ ಇದೀಗ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೂ ಒದಗಿ ಬರುತ್ತಿದೆ. ಹೌದು, ದೋಸ್ತಿ ಸರ್ಕಾರದ ವಿರುದ್ಧ ಸಿಡಿದೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ಇದೀಗ ಬಿಜೆಪಿ ಸರ್ಕಾರದ ವಿರುದ್ಧವೂ ಸಿಡಿದೆದ್ದಿದ್ದಾರೆ.

“ಬಿಜೆಪಿ ಸರ್ಕಾರದಲ್ಲಿ ಲಕ್ಷ್ಮಣ್ ಸವದಿಯನ್ನು ಹೇಗೆ ಮಂತ್ರಿ ಮಾಡಿದ್ದೀರಿ..? ಲಕ್ಷ್ಮಣ್ ಸವದಿ ಶಾಸಕರೂ ಆಗಿಲ್ಲ. ಪರಿಷತ್ ಸದಸ್ಯರೂ ಆಗಿಲ್ಲ. ಆದರೂ ಅವರಿಗೆ ಮಂತ್ರಿ ಸ್ಥಾನ ಹೇಗೆ ಕೊಟ್ಟಿದ್ದೀರಿ ಎಂದು ಸಿಎಂ ಬಿಎಸ್ವೈ ವಿರುದ್ಧ ರಮೇಶ್ ಜಾರಕಿಹೊಳಿ ವಿರುದ್ಧ ಗರಂ ಆಗಿದ್ದಾರೆ ಎನ್ನಲಾಗಿದೆ. “ನಮಗೆ ಕೊಟ್ಟ ಭರವಸೆಯನ್ನು ಮೊದಲು ಉಳಿಸಿಕೊಳ್ಳಿ, ನಮಗೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿಸಿ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆಂತೆ.

ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದ ಅನರ್ಹ ಶಾಸಕರು ಬಿಜೆಪಿ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಖುದ್ದು ಬಂದರೆ ಮಾತ್ರ ಮಾತನಾಡಲು ಅನರ್ಹ ಶಾಸಕರು ತೀರ್ಮಾನಿಸಿದ್ದಾರೆ. ಡಾ. ಅಶ್ವಥ್ ನಾರಾಯಣ ಮತ್ತು ಬಿ.ವೈ. ವಿಜಯೇಂದ್ರ ಜೊತೆ ಮಾತುಕತೆ ಇಲ್ಲ ಎಂದಿದ್ದಾರೆ. ರಾಜೀನಾಮೆ ನೀಡುವ ವೇಳೆ ನಮ್ಮ ಜೊತೆ ಮಾತುಕತೆ ನಡೆಸಿದವರೇ ಬೇರೆ, ಈಗ ನಾವೇ ಮಾಡಿಸಿದ್ದು ಎಂದು ಓಡಾಡುತ್ತಿರುವವರೇ ಬೇರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
