ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಭೀಕರ ಪ್ರವಾಹ ಉಂಟಾಗಿದ್ದು, ಪ್ರವಾಹ ಪೀಡಿತರ ರಕ್ಷಣಗೆ ರಾಜ್ಯ ಸರ್ಕಾರ ಈಗಾಗಲ್ಲೇ ಹಲವು ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪ್ರವಾಹಕ್ಕೆ ತುತ್ತಾಗಿರುವ ಬೆಳಗಾವಿ,ವಿಜಯಪುರ, ರಾಯಚೂರು ಸೇರಿದಂತೆ ಅರ್ಧ ಕರ್ನಾಟಕವೇ ಮುಳುಗಿ ಹೋಗಿದೆ ಎನ್ನಬಹದು.
ಈ ವಿಚಾರ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳಿಂದ ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಬೇಕಾದ ಆಗತ್ಯ ವಸ್ತುಗಳನ್ನು ಪೂರೈಕೆ ಮಾಡುವಲ್ಲಿ ಮುಂದಾಗಿದೆ. ಇತ್ತ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಅವರು ಪ್ರವಾಹ ಪೀಡಿತರಿಗೆ ಸಹಾಯವಾಗಲಿ ಎಂಬುವ ಹಿತದೃಷ್ಟಿಯಿಂದ 10 ಕೋಟಿ ರೂಪಾಯಿಯನ್ನು ಸಿಎಂ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ಇದೇ ಸಾಲಿನಲ್ಲಿ ಕನ್ನಡ ಚಿತ್ರನಟ ಉಪೇಂದ್ರ ಅವರು 5 ಲಕ್ಷ ರೂಪಾಯಿಗಳನ್ನು ಸಿಎಂ ಪರಿಹಾರ ನಿಧಿಗೆ ನೀಡುವ ಮೂಲಕ ಪ್ರವಾಹದಲ್ಲಿ ಸಿಲುಕಿರುವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.