ಸಾಧು ಕೋಕಿಲಾ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ!

0
266

ಮಸಾಜ್ ಪಾರ್ಲರ್ ನಲ್ಲಿ‌ ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಧು ಕೋಕಿಲಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.ಮೈಸೂರಿನ ಸರಸ್ವತಿಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಬೋಗಾದಿ ರಿಂಗ್‌ ರೋಡ್‌ ಬಳಿಯ ಮಸಾಜ್ ಪಾರ್ಲರ್‌ನ ಮಹಿಳೆಯೊಬ್ಬರ ಘನತೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು.

 

ಈ ಕುರಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈ ಸಮನ್ಸ್ ರದ್ದುಗೊಳಿಸಿಬೇಕೆಂದು ಕೋರಿ ಸಾಧು ಕೋಕಿಲಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತ್ತು.ತಮ್ಮ ವಿರುದ್ಧದ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ. ತಮ್ಮ ತೇಜೋವಧೆಗೆ ಪ್ರಯತ್ನಿಸಲಾಗುತ್ತಿದೆ. ನಾನು ಮಸಾಜ್‌ ಪಾರ್ಲರ್ಗೆ ಭೇಟಿಯನ್ನೇ ನೀಡಿಲ್ಲ ಎಂದ ಮೇಲೂ ನನ್ನನ್ನು ಆರೋಪ ಪಟ್ಟಿಗೆ ಸೇರಿಸಿದ್ದಾರೆ ಎಂದು ಸಾಧು ಕೋಕಿಲಾ ವಾದಿಸಿದ್ದಾರೆ.

LEAVE A REPLY

Please enter your comment!
Please enter your name here